ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದಾಪುರ: ರಾಷ್ಟ್ರೀಯ ಶಿಕ್ಷಣ ನೀತಿ ಉಳಿಸಿಕೊಳ್ಳಲು ಕೋಟಿ ಸಹಿ ಸಂಗ್ರಹ ಅಭಿಯಾನ

Published 5 ಡಿಸೆಂಬರ್ 2023, 14:44 IST
Last Updated 5 ಡಿಸೆಂಬರ್ 2023, 14:44 IST
ಅಕ್ಷರ ಗಾತ್ರ

ಸಿದ್ದಾಪುರ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಭರಪೂರ ಆಯ್ಕೆಯ ಅವಕಾಶಗಳನ್ನು ಒದಗಿಸಲಾಗಿದೆ ಎಂದು ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಪಟ್ಟಣದ ಎಂ.ಜಿ.ಸಿ. ಕಲಾ, ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಸತ್ತು, ಎನ್.ಎಸ್.ಎಸ್. ಘಟಕ ಮತ್ತು ಎಂ.ಜಿ.ಸಿ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಎನ್.ಇ.ಪಿ ಬೇಕು-ಒಂದು ಕೋಟಿ ಸಹಿ ಸಂಗ್ರಹ ಅಭಿಯಾನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು.

ರಾಜ್ಯ ಸರ್ಕಾರದ ದ್ವಂದ್ವ ನೀತಿಗಳ ಕಾರಣದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಿ, ಯಾವುದೇ ಸಿದ್ಧತೆ ಇಲ್ಲದೆ ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಿರುವುದು ಅವೈಜ್ಞಾನಿಕ ಕ್ರಮ. ಹಲವಾರು ಶಿಕ್ಷಣ ತಜ್ಷರು, ಸಂಘ ಸಂಸ್ಥೆಗಳ ಪರಿಣತರು, ಶಿಕ್ಷಣ ವಲಯದ ಪ್ರಮುಖರು, ಸಾವಿರಾರು ತಜ್ಷರ ಅಭಿಪ್ರಾಯ ಸಂಗ್ರಹಿಸಿ, ನಿರಂತರ ಅಧ್ಯಯನದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಲಾಗಿದೆ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಪಡಿಸಬಾರದೆಂದು ಅಭಿಯಾನವನ್ನು ರಾಜ್ಯದಾದ್ಯಂತ ಆಯೋಜಿಸಿದ್ದೇವೆ ಎಂದರು.

ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಶಶಿಭೂಷಣ ಹೆಗಡೆ ಮಾತನಾಡಿ, ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭವಿತವ್ಯದ ಭಾರತವನ್ನು ಕಟ್ಟಲು ಸಹಕಾರಿಯಾಗಿದೆ ಎಂಎದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ಸುರೇಶ ಎಸ್. ಗುತ್ತಿಕರ್ ವಹಿಸಿದ್ದರು.

ದಿವ್ಯಾ ಡಿ. ಹೆಗಡೆ ಸ್ವಾಗತಿಸಿದರು. ಪ್ರೀತಿ ಗೌಡರ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. ದೀಪಿಕಾ ನಾಯ್ಕ ವಂದಿಸಿದರು. ಅಂಜುಮ್ ಎ. ಸಾಬ್ ನಿರೂಪಿಸಿದರು. ಒಂದು ಕೋಟಿ ಸಹಿ ಸಂಗ್ರಹ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT