ಕಾರವಾರ: ‘ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ್ ಅದಾಲತ್‍ನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿ ದಂಡ ಪಾವತಿಗೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಶೇ 50ರಷ್ಟು ರಿಯಾಯಿತಿ ನೀಡಲಾಗುತ್ತಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ರೇಣುಕಾ ಡಿ.ರಾಯ್ಕರ್ ತಿಳಿಸಿದ್ದಾರೆ.
‘ಜುಲೈ 8 ಮತ್ತು 9ರಂದು ಎರಡು ದಿನ ರಿಯಾಯಿತಿ ದರದಲ್ಲಿ ದಂಡ ಪಾವತಿಸಲು ಅವಕಾಶ ನೀಡಲಾಗುತ್ತಿದೆ. ಇದಲ್ಲದೆ ಅಪಘಾತ, ಬ್ಯಾಂಕ್ ಸಾಲ ವಸೂಲಾತಿ, ಚೆಕ್ ಅಮಾನ್ಯ, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಅಕ್ರಮ ಮರಳು ಸಾಗಣೆ, ಗ್ರಾಹಕರ ವಿವಾದ ಸೇರಿದಂತೆ ವಿವಿಧ ಬಗೆಯ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.