ಕಾರವಾರ: ಭಾರತೀಯ ನೌಕಾದಳದ ಯುದ್ಧ ವಿಮಾನ ವಾಹಕ ನೌಕೆ ‘ಐಎನ್ಎಸ್ ವಿಕ್ರಮಾದಿತ್ಯ’ದಲ್ಲಿ ಶನಿವಾರ ಬೆಳಗಿನ ಜಾವದಲ್ಲಿ ಸಣ್ಣ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನೌಕೆಗೆ ಮತ್ತು ಅದರಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ.

ನೌಕೆಯಲ್ಲಿ ನಾವಿಕರು ಮಲಗುವ ಕೊಠಡಿಗಳಿರುವ ಭಾಗದಿಂದ ಹೊಗೆ ಬರುತ್ತಿದ್ದುದನ್ನು ಆ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಗಮನಿಸಿದರು. ಅವರು ತಕ್ಷಣವೇ ಬೆಂಕಿ ನಂದಿಸುವ ಕಾರ್ಯ ಮಾಡಿದರು.

ಅವಘಡದ ಬಗ್ಗೆ ನೌಕಾದಳದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ. ಆ ಸಂದರ್ಭದಲ್ಲಿ ನೌಕೆಯಲ್ಲಿದ್ದ ಎಲ್ಲರನ್ನೂ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ನೌಕಾದಳದ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ... ಭಾರತದಲ್ಲಿ ಕೋವಿಡ್ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ: ಕಮಲಾ ಹ್ಯಾರಿಸ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.