ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕ್ರೀಡಾಪಟುಗಳಿಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯ: ರಮಾನಂದ

Published : 1 ಅಕ್ಟೋಬರ್ 2024, 13:48 IST
Last Updated : 1 ಅಕ್ಟೋಬರ್ 2024, 13:48 IST
ಫಾಲೋ ಮಾಡಿ
Comments

ಅಂಕೋಲಾ: ‘ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅಂಕೋಲಾ ತಾಲ್ಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸುಸಜ್ಜಿತ ಕ್ರೀಡಾಂಗಣ ಅಗತ್ಯವಿದೆ’ ಎಂದು ಸಾಮಾಜಿಕ ಕಾರ್ಯಕರ್ತ ರಮಾನಂದ ನಾಯಕ ಹೇಳಿದರು.

ತಾಲ್ಲೂಕಿನ ಶೆಟಗೇರಿಯ ಸತ್ಯಾಗ್ರಹ ಸ್ಮಾರಕ ಕ್ರೀಡಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿದ ಶೆಟಗೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಭೀಧರ ನಾಯಕ, ‘ವಿದ್ಯಾರ್ಥಿಗಳು ಪಾಠದ ಜತೆಗೆ ಕ್ರೀಡಾ ಚಟುವಟಿಕೆಯತ್ತಲೂ ಗಮನ ನೀಡಬೇಕು’ ಎಂದರು.

ಬಿಇಒ ಮಂಗಳಲಕ್ಷ್ಮಿ ಪಾಟೀಲ, ದೈಹಿಕ ಶಿಕ್ಷಣ ಪರಿವೀಕ್ಷಕ ಮಂಜುನಾಥ ನಾಯಕ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಧೀರ ನಾಯಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ನಾಯಕ, ರಾಜು ನಾಯಕ, ಎನ್.ವಿ.ರಾಥೋಡ್, ಗಣಪತಿ ನಾಯಕ, ದೇವರಾಯ ನಾಯಕ ಇದ್ದರು. ರಾಜೇಂದ್ರ ಕೇಣಿ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಜೇಶ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಶಿವಾನಂದ ನಾಯಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT