ಕಾರವಾರ: ‘ಮಾತೃಭಾಷೆಯನ್ನು ನಿರ್ಲಕ್ಷಿಸುವುದು ಹೆತ್ತ ತಾಯಿಯನ್ನು ಅವಮಾನಿಸಿದಂತೆ. ಸ್ವಭಾಷೆ ಮೂಲೆಗುಂಪಾದಷ್ಟು ಸ್ವಂತಿಕೆ, ಆತ್ಮಾಭಿಮಾನವೂ ದೂರವಾಗುತ್ತದೆ’ ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.

ಗೋಕರ್ನದ ಅಶೋಕೆಯಲ್ಲಿ ನಡೆಯುತ್ತಿರುವ ಸ್ವಭಾಷಾ ಚಾತುಮಾಸ್ಯ ವ್ರತದ 46ನೇ ದಿನವಾದ ಭಾನುವಾರ ಭಕ್ತರನ್ನು ಉದ್ದೇಶಿಸಿ ಅವರು ಆಶೀರ್ವಚನ ನೀಡಿದರು.

‘ಭಾರತೀಯ ಸಂಸ್ಕೃತಿಯಲ್ಲಿ ಮಾತೃಸ್ಥಾನ ಎಲ್ಲಕ್ಕಿಂತ ಪವಿತ್ರ. ಭಾಷೆಯ ವಿಚಾರಕ್ಕೆ ಬಂದರೆ ಮಾತೃಭಾಷೆಗೂ ಅದೇ ಮಹತ್ವ ಇದೆ. ಆದ್ದರಿಂದ ಪಾಶ್ಚಿಮಾತ್ಯ ಭಾಷೆಗಳ ಶಬ್ದಗಳನ್ನು ನಮ್ಮ ಭಾಷೆಯಿಂದ ಕಿತ್ತುಹಾಕಿ ಸ್ವಭಾಷೆ ಶುದ್ಧಗೊಳಿಸಲು ಸಮಾಜಕ್ಕೆ ಪ್ರೇರಣೆ ನೀಡುವುದೇ ಈ ಚಾತುರ್ಮಾಸ್ಯದ ಉದ್ದೇಶ’ ಎಂದರು.

‘ಭಾರತೀಯ ಭಾಷೆಗಳಿಗೆ ಇರುವ ಋಷಿದೃಷ್ಟಿ, ಅರ್ಥಗಾಂಭೀರ್ಯ, ವೈವಿಧ್ಯತೆ, ಸಮೃದ್ಧತೆ ಅನ್ಯಭಾಷೆಗಳಿಗೆ ಇಲ್ಲ. ದೇಶಿ ಸೊಗಡಿನೊಂದಿಗೆ ಅನ್ಯಭಾಷೆಯ ಪದಗಳನ್ನು ಬಳಕೆ ಮಾಡುವ ಪ್ರವೃತ್ತಿಯ ಪರಿಣಾಮವಾಗಿ ಭಾರತೀಯ ಭಾಷೆಗಳ ಅಸ್ತಿತ್ವಕ್ಕೆ ಧಕ್ಕೆ ಬಂದಿದೆ. ಈ ಹಂತದಲ್ಲಾದರೂ ಅನ್ಯಭಾಷೆಗಳ ಪದಗಳನ್ನು ತ್ಯಜಿಸುವ ಮೂಲಕ ಭಾಷೆಯ ಶುದ್ಧೀಕರಣಕ್ಕೆ ಪ್ರೇರಣೆ ನೀಡುವ ಪ್ರಯತ್ನ ನಡೆಸುತ್ತಿದ್ದೇವೆ’ ಎಂದರು.

ವಿದ್ವಾನ್ ದೀಪಕ್ ಶರ್ಮಾ ನೇತೃತ್ವದಲ್ಲಿ ಪುತ್ತೂರಿನ ಮೂಕಾಂಬಿಕಾ ಸಾಂಸ್ಕೃತಿಕ ಅಕಾಡೆಮಿ ವಿದ್ಯಾರ್ಥಿಗಳಿಂದ ಭರತನಾಟ್ಯ ಪ್ರದರ್ಶನ ನಡೆಯಿತು.

ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ಗಾಣಿಗ ಸಮಾಜದ ಮುಖಂಡರಾದ ಮಹೇಶ ಶೆಟ್ಟಿ, ದಾಮೋದರ ಶೆಟ್ಟಿ, ಮಾರುತಿ ಶೆಟ್ಟಿ, ಸುಭಾಷ್ ಶೆಟ್ಟಿ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ಚಾತುರ್ಮಾಸ್ಯ ತಂಡದ ಸಂಚಾಲಕ ಮಂಜುನಾಥ ಸುವರ್ಣಗದ್ದೆ,ಜಿ.ಕೆ.ಹೆಗಡೆ, ಕೆ.ಎನ್. ಹೆಗಡೆ, ಅನುರಾಧಾ ಪಾರ್ವತಿ, ವಿಷ್ಣು ಬನಾರಿ, ಎಂ.ಎನ್.ಮಹೇಶ ಭಟ್ಟ ಪಾಲ್ಗೊಂಡಿದ್ದರು.

ಮಾತೃಭಾಷೆಯಲ್ಲಿ ನಿರರ್ಗಳವಾಗಿ ಮಾತನಾಡಲು ಸೂಕ್ತ ತಯಾರಿ ನಡೆಸಿಕೊಳ್ಳುವ ಸ್ಥಿತಿಗೆ ಇಂದಿನ ಸಮಾಜ ತಲುಪಿದೆ. ಭಾಷೆಯೊಳಗೆ ಅನ್ಯಭಾಷೆ ನುಸುಳುವಿಕೆ ಹೆಚ್ಚಿದ್ದರಿಂದ ಇಂತಹ ಪರಿಣಾಮ ಎದುರಿಸಬೇಕಿದೆ

-ರಾಘವೇಶ್ವರ ಭಾರತೀ ಸ್ವಾಮೀಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.