ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ | ನೌಕಾನೆಲೆ ಮಾಹಿತಿ ಸೋರಿಕೆ ಶಂಕೆ: ಮೂವರ ವಿಚಾರಣೆ

Published 28 ಆಗಸ್ಟ್ 2024, 22:30 IST
Last Updated 28 ಆಗಸ್ಟ್ 2024, 22:30 IST
ಅಕ್ಷರ ಗಾತ್ರ

ಕಾರವಾರ: ಇಲ್ಲಿನ ಕದಂಬ ನೌಕಾನೆಲೆಯ ಕೆಲ ಮಾಹಿತಿ ಸೋರಿಕೆಯಾದ ಶಂಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಬುಧವಾರ ಕಾರವಾರ ಮತ್ತು ಅಂಕೋಲಾದಲ್ಲಿ ನೌಕಾನೆಲೆಯ ಮೂವರು ಹೊರಗುತ್ತಿಗೆ ನೌಕರರನ್ನು ವಶಕ್ಕೆ ಪಡೆದು, ಪ್ರತ್ಯೇಕ ಸ್ಥಳಗಳಲ್ಲಿ ವಿಚಾರಣೆ ನಡೆಸಿದರು. ತಾಲ್ಲೂಕಿನ ಮುದಗಾ, ತೊಡೂರು ಮತ್ತು ಅಂಕೋಲಾಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

‘ಮುದಗಾದ ವೇತನ ತಾಂಡೇಲ, ತೊಡೂರಿನ ಸಚಿನ್ ನಾಯ್ಕ ಮತ್ತು ಅಂಕೋಲಾದ ಅಕ್ಷಯ ನಾಯ್ಕ ಎಂಬುವರನ್ನು ಎನ್ಐಎ ಅಧಿಕಾರಿಗಳು ವಿಚಾರಣೆ ನಡೆಸಿದರು. ಸಚಿನ್ ಹೊರತುಪಡಿಸಿ ಉಳಿದಿಬ್ಬರ ವಿಚಾರಣೆ ದೀರ್ಘ ಕಾಲ ನಡೆಯಿತು’ ಎಂದು ಮೂಲಗಳು ತಿಳಿಸಿವೆ.

‘2023ರಲ್ಲಿ ನೌಕಾನೆಲೆಯ ರಹಸ್ಯ ಮಾಹಿತಿ ಸೋರಿಕೆ ಹಿನ್ನೆಲೆಯಲ್ಲಿ ಹೈದರಾಬಾದ್‍ನಲ್ಲಿ ಎನ್ಐಎ ಪ್ರಕರಣ ದಾಖಲಿಸಿಕೊಂಡಿತ್ತು. ಇದಕ್ಕೆ ಪೂರಕವಾಗಿ ಹೊರಗುತ್ತಿಗೆ ನೌಕರರನ್ನು ವಿಚಾರಣೆಗೆ ಒಳಪಡಿಸಿದೆ. ಈ ಮೂವರು ನೌಕರರ ಖಾತೆಗೆ ಅನಾಮಧೇಯ ವ್ಯಕ್ತಿಗಳು ಹಣ ಜಮಾ ಮಾಡಿದ ಬಗ್ಗೆಯೂ ವಿಚಾರಣೆ ನಡೆದಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT