ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭ್ರಷ್ಟರಿಗೆ ಕಾಂಗ್ರೆಸ್‌ನಲ್ಲಿ ಜಾಗವಿಲ್ಲ’: ಹೆಬ್ಬಾರ್ ವಿರುದ್ಧ ಪೋಸ್ಟರ್ ಅಭಿಯಾನ

Published 25 ಮಾರ್ಚ್ 2024, 6:12 IST
Last Updated 25 ಮಾರ್ಚ್ 2024, 6:12 IST
ಅಕ್ಷರ ಗಾತ್ರ

ಶಿರಸಿ: ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದ ಗೋಡೆಗಳ ಮೇಲೆ 'ನಮ್ಮ‌‌ ಪಕ್ಷ, ನಮ್ಮ ಹಕ್ಕು, ಭ್ರಷ್ಟರಿಗೆ ಇಲ್ಲಿ ಜಾಗವಿಲ್ಲ' ಎಂಬ ಪೋಸ್ಟರ್ ಅಂಟಿಸುವ ಮೂಲಕ ಶಾಸಕ ಶಿವರಾಮ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆಗೆ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು (ಸೋಮವಾರ) ಬೆಳಿಗ್ಗೆ ಈ ಘಟನೆ ನಡೆದಿದ್ದು, ಹೆಬ್ಬಾರ್ ಕಾಂಗ್ರೆಸ್ ‌ಸೇರ್ಪಡೆಗೆ ಸದ್ದಿಲ್ಲದೇ ವಿರೋಧ ವ್ಯಕ್ತವಾಗಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆಯಲಿದ್ದು, ಸಭೆಯ ಮುಂಚಿತವಾಗಿ ಹೆಬ್ಬಾರ್ ವಿರುದ್ಧ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕಾಂಗ್ರೆಸ್‌ನಿಂದ ಬಾಂಬೆ ಟೀಮ್‌ ಜತೆ ಬಿಜೆಪಿಗೆ ಹೋಗಿ ಸಚಿವರಾಗಿದ್ದ ಹೆಬ್ಬಾರ್ ಈಗ ಮತ್ತೆ ಕಾಂಗ್ರೆಸ್ ಬಾಗಿಲು‌ ತಟ್ಟುತ್ತಿರುವ ಕಾರಣ ಕಾಂಗ್ರೆಸ್‌ನ ಕೆಲ ಸಚಿವರು, ಶಾಸಕರು ವಿರೋಧಿಸಿದ್ದರು. ಈಗ ಕಾರ್ಯಕರ್ತರಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ನಂತರ ಕಾಂಗ್ರೆಸ್ ಸೇರ್ಪಡೆ ವಿಚಾರ ಮಾಡುವುದಾಗಿ ಹೆಬ್ಬಾರ್ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT