ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ: ಸರ್ಕಾರದಿಂದ ಬಾರದ ಪ್ರತಿಕ್ರಿಯೆ’

ಟಾಟಾ ಸ್ಮಾರಕ ಆಸ್ಪತ್ರೆಯ ಡಾ.ಉಮೇಶ್ ಮಹಾಂತಶೆಟ್ಟಿ ಬೇಸರ
Last Updated 7 ಡಿಸೆಂಬರ್ 2018, 16:20 IST
ಅಕ್ಷರ ಗಾತ್ರ

ಕಾರವಾರ: ‘ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಕ್ಯಾನ್ಸರ್ ಆಸ್ಪತ್ರೆಗಳನ್ನುಸ್ಥಾಪಿಸುವ ಬಗ್ಗೆ ಆರು ವರ್ಷಗಳ ಹಿಂದೆಯೇ ಪ್ರಸ್ತಾವ ಸಲ್ಲಿಸಲಾಗಿತ್ತು. ಆದರೆ, ರಾಜ್ಯ ಸರ್ಕಾರದಿಂದ ಈವೆರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ’ ಎಂದು ಮುಂಬೈನ ಟಾಟಾ ಸ್ಮಾರಕ ಆಸ್ಪತ್ರೆಯ (ಟಿಎಂಎಚ್) ಗ್ರಂಥಿ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಉಮೇಶ್ ಮಹಾಂತಶೆಟ್ಟಿ ಬೇಸರ ವ್ಯಕ್ತಪಡಿಸಿದ್ದಾರೆ.

‘ಪ್ರಜಾವಾಣಿ’ ಜತೆ ದೂರವಾಣಿಮೂಲಕ ಮಾತನಾಡಿದ ಅವರು, ‘ಕಾರವಾರ, ಮಂಗಳೂರು, ರಾಯಚೂರು ಮತ್ತು ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಆಸ್ಪತ್ರೆತೆರೆಯಲುಟಿಎಂಎಚ್ ಉದ್ದೇಶಿಸಿತ್ತು.ಈ ಸಂಬಂಧ2012–13ರಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಹೇಳಿದರು.

‘ರಾಜ್ಯ ಸರ್ಕಾರದ ಅಂದಿನ ಪ್ರಧಾನ ಕಾರ್ಯದರ್ಶಿ ಜತೆ ನಾವು ಬೆಂಗಳೂರಿನಲ್ಲಿ ಒಂದೆರಡು ಸಭೆಗಳನ್ನೂ ಮಾಡಿದೆವು. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜತೆಗೂ ಚರ್ಚಿಸಿದೆವು. ರೇಡಿಯೋಥೆರಪಿಗೆ ಅಗತ್ಯವಾದಮೂಲಸೌಕರ್ಯ, ಅವುಗಳ ಯಂತ್ರಗಳನ್ನು ಟಿಎಂಎಚ್‌ನಿಂದ ನೀಡಲಾಗುತ್ತದೆ ಎಂದು ತಿಳಿಸಿದ್ದೆವು. ನಮ್ಮ ಪ್ರಸ್ತಾವಕ್ಕೆ ಒಪ್ಪಿಗೆ ಸಿಕ್ಕಿ ಒಂದಷ್ಟು ಕಡತಗಳು ಓಡಾಡಿದವು. ಬಳಿಕ ಏನಾಯ್ತು ಎಂದು ಲಿಖಿತವಾಗಿ ಯಾವ ಮಾಹಿತಿಯನ್ನೂ ನೀಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಕ್ಯಾನ್ಸರ್ ರೋಗಿಗಳಿಗೆ ಗ್ರಾಮೀಣ ಭಾಗದಲ್ಲೂಚಿಕಿತ್ಸೆ ದೊರಕಿಸುವುದು ಸಂಸ್ಥೆಯ ಉದ್ದೇಶವಾಗಿದ್ದು,ರೇಡಿಯೇಷನ್‌ಗೆ ಚಿಕಿತ್ಸೆ ನೀಡುವುದುಆದ್ಯತೆಯಾಗಿದೆ. ಜಿಲ್ಲಾ ಆಸ್ಪತ್ರೆ ಅಥವಾ ವೈದ್ಯಕೀಯ ಕಾಲೇಜು ಇರುವ ಪ್ರದೇಶದಲ್ಲೇ ಕ್ಯಾನ್ಸರ್ ಆಸ್ಪತ್ರೆ ಆರಂಭಿಸುತ್ತೇವೆ. ಇತರ ವಿವಿಧ ಚಿಕಿತ್ಸೆಗಳನ್ನು ವೈದ್ಯಕೀಯ ಕಾಲೇಜಿನಲ್ಲಿ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದೆವು’ ಎಂದು ಹೇಳಿದರು.

‘ಕಾರವಾರದಲ್ಲಿಆಸ್ಪತ್ರೆ ಸ್ಥಾಪನೆ ಸಂಬಂಧ ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯನಿರ್ದೆಶಕ ಡಾ.ಶಿವಾನಂದದೊಡ್ಡಮನಿ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿದರು.ಅದರಫಲಿತಾಂಶವೇನುಎಂಬ ಬಗ್ಗೆಯೂ ನಮಗೆ ಮಾಹಿತಿ ಲಭಿಸಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT