ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಹಮ್ಮಿಕೊಂಡಿರುವ ‘ದೇಖೋ ಅಪ್ನಾ ದೇಶ್ ಪೀಪಲ್ಸ್ ಚಾಯ್ಸ್’ ಅಭಿಯಾನದಡಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಮತ ಚಲಾಯಿಸಿ ಎಂದು ಪ್ರವಾಸೋದ್ಯಮ ಇಲಾಖೆ ಮನವಿ ಮಾಡಿದೆ.
‘ಕಾರ್ಯಕ್ರಮದ ಭಾಗವಾಗಿ ಯುವಕರು, ಹಿರಿಯ ನಾಗರೀಕರು ಹಾಗೂ ಪ್ರವಾಸಿಗರು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳನ್ನು https://innovateindia.mygov.in/dekho-apna-desh/ ಲಿಂಕ್‌ನಲ್ಲಿ ಆಯ್ಕೆಗೊಳಿಸಬೇಕು’ ಎಂದು ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.