ಶಿರಸಿ: ತಾಲ್ಲೂಕಿನ ವಿವಿಧ ಶಾಲೆಗಳಲ್ಲಿ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಮಂಗಳವಾರ ವೀಕ್ಷಿಸಿದರು.

ಈ ವೇಳೆ ಮಾತನಾಡಿದ ಅವರು, ‘ಶಾಲೆಗಳ ಸುರಕ್ಷತೆ ದೃಷ್ಟಿಯಿಂದ ಹಾಗೂ ಶಾಲಾ ಆವರಣದಲ್ಲಿನ ಸ್ವತ್ತುಗಳನ್ನು ಸಂರಕ್ಷಿಸಲು ಕಾಂಪೌಂಡ್ ನಿರ್ಮಾಣ ಅತ್ಯಗತ್ಯವಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಅನುದಾನದ ಕೊರತೆಯಿಂದಾಗಿ ಅದೆಷ್ಟೋ ಶಾಲೆಗಳಿಗೆ ಕಾಂಪೌಂಡ್ ಭಾಗ್ಯವೇ ಇಲ್ಲದಂತಾಗಿದೆ. ಹೀಗಾಗಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಾಮುಖ್ಯತೆ ನೀಡಿ ಶಾಲೆಗೆ ಭದ್ರತೆ ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ನರೇಗಾದಡಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಶಾಲೆಗೆ ಅಗತ್ಯವಿರುವ ಶೌಚಾಲಯ, ಆಟದ ಮೈದಾನ, ಅಂಗನವಾಡಿ ಕಟ್ಟಡ, ಮಳೆ ನೀರಿನ ಕೊಯ್ಲು, ಕಾಂಪೌಂಡ್, ಅಡುಗೆಕೋಣೆ, ಭೋಜನಾಲಯದಂತಹ ಅನೇಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರಿಂದ ಗ್ರಾಮೀಣ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು ಒಂದೊಂದಾಗಿ ಪೂರೈಸಲ್ಪಡುತ್ತಿವೆ’ ಎಂದರು.

‘2024-25ರ ಆರ್ಥಿಕ ವರ್ಷದಲ್ಲಿ ತಾಲ್ಲೂಕಿನಾದ್ಯಂತ 4 ಶಾಲಾ ಶೌಚಾಲಯಗಳನ್ನು ಕೈಗೆತ್ತಿಕೊಂಡಿದ್ದು 3 ಮುಕ್ತಾಯಗೊಂಡಿದ್ದು, ಒಂದು ಅಂತಿಮ ಹಂತದಲ್ಲಿದೆ. 12 ಶಾಲಾ ಕಾಂಪೌಂಡ್ಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಇದರಲ್ಲಿ 9 ಪೂರ್ಣಗೊಂಡಿದ್ದು, ಇನ್ನೂ 2 ಪ್ರಗತಿಯಲ್ಲಿವೆ ಹಾಗೂ ಒಂದು ಆರಂಭವಾಗಬೇಕಿದೆ. 6 ಆಟದ ಮೈದಾನ ಕಾಮಗಾರಿಗಳಲ್ಲಿ 3 ಪೂರ್ಣಗೊಂಡಿದ್ದು ಇನ್ನೂ 3 ಆರಂಭವಾಗಬೇಕಿದೆ. ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಕೋಡ ಶಾಲೆಯಲ್ಲಿ ಒಂದು ಅಡುಗೆಕೋಣೆ ಅಂತಿಮ ಹಂತದಲ್ಲಿದ್ದು ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ಶಾಲಾ ಅಭಿವೃದ್ಧಿಗೆ ನರೇಗಾ ಯೋಜನೆಯಲ್ಲಿ ಬಹುಮುಖ್ಯವಾಗಿ ಪರಿಗಣಿಸಲಾಗಿದ್ದು, ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅನುಕೂಲ ಕಲ್ಪಿಸಿದೆ. ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.