ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆ: ನೂತನ ಪದಾಧಿಕಾರಿಗಳ ಆಯ್ಕೆ

Published 29 ಮೇ 2024, 14:44 IST
Last Updated 29 ಮೇ 2024, 14:44 IST
ಅಕ್ಷರ ಗಾತ್ರ

ಸಿದ್ದಾಪುರ: ಸಿದ್ದಾಪುರದ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಶೈವ ಲಿಂಗಾಯತ ಮಹಾಸಭಾ ಬೆಂಗಳೂರಿನ ತಾಲ್ಲೂಕು ಘಟಕದ ಆಶ್ರಯದಲ್ಲಿ ಪಟ್ಟಣದ ಲಯನ್ಸ್‌ ಬಾಲಭವನದಲ್ಲಿ ಭಾನುವಾರ ಮಧ್ಯಾಹ್ನ ಪಿಯು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಪೃಥ್ವಿರಾಜ್ ಪಾಟೀಲ್ ವಡಗೇರಿ ಉಪನ್ಯಾಸ ನೀಡಿದರು. ಸಂಸ್ಥೆಯ ಅಧ್ಯಕ್ಷರಾದ ಪರಮೇಶ್ವರಯ್ಯ ಕಾನಳ್ಳಿ ಮಠ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಿದರು.

ನಂತರ ವೀರಶೈವ ಕ್ಷೇಮಾಭಿವೃದ್ಧಿ ಸಂಸ್ಥೆಯ ಸರ್ವ ಸಾಧಾರಣ ಸಭೆ ನಡೆಯಿತು. ಸಭೆಯಲ್ಲಿ ಅಧ್ಯಕ್ಷರಾಗಿ ಸಿ.ಎಸ್. ಗೌಡರ್, ಉಪಾಧ್ಯಕ್ಷರಾಗಿ ನಾಗರಾಜ ದೊಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಐ.ಕೆ. ಪಾಟೀಲ್ ವಡಗೇರಿ, ಖಜಾಂಜಿಯಾಗಿ ನಾಗರಾಜ ಗೌಡರ್ ಕೋಲಸಿರ್ಸಿ, ಸಹಕಾರ್ಯದರ್ಶಿಯಾಗಿ ಮುರುಗೇಶ ಬಸ್ತಿಕೊಪ್ಪ ಹಾಗೂ ಇತರ 16 ಸದಸ್ಯರನ್ನು ಆಯ್ಕೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT