ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಓಬವ್ವ ಆತ್ಮರಕ್ಷಣೆ ಕಲೆ’ಗೆ ಫೆ.7ರಂದು ಚಾಲನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Last Updated 3 ಫೆಬ್ರುವರಿ 2022, 9:42 IST
ಅಕ್ಷರ ಗಾತ್ರ

ಕಾರವಾರ: ‘ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ಸ್ವ-ರಕ್ಷಣೆಗಾಗಿ ರಾಜ್ಯದಾದ್ಯಂತ ಕರಾಟೆ ತರಬೇತಿಯ ಯೋಜನೆ ರೂಪಿಸಲಾಗಿದೆ. ಓಬವ್ವ ಆತ್ಮರಕ್ಷಣೆ ಕಲೆ ಎಂದು ಹೆಸರಿಡಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ.7ರಂದು ವಿಧಾನಸೌಧದ ಮುಂದೆ ಉದ್ಘಾಟಿಸಲಿದ್ದಾರೆ’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘1,702 ವಸತಿಯುತ ಶಾಲೆಗಳಲ್ಲಿ ಮತ್ತು ವಸತಿ ನಿಲಯಗಳಲ್ಲಿ, 800ಕ್ಕೂ ಅಧಿಕ ವಸತಿಯುತ ಶಿಕ್ಷಣ ಸಂಸ್ಥೆಗಳಲ್ಲಿ (ಕ್ರೈಸ್ ಶಾಲೆಗಳು), ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ತರಬೇತಿ ನೀಡಲಾಗುತ್ತದೆ. ಮೊದಲ ಹಂತದಲ್ಲಿ 1.82 ಲಕ್ಷ ವಿದ್ಯಾರ್ಥಿನಿಯರು ತರಬೇತಿ ಪಡೆಯಲಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಬ್ಲ್ಯಾಕ್ ಬೆಲ್ಟ್ ಪಡೆದಿರುವ ಮಹಿಳಾ ಕರಾಟೆಪಟುಗಳನ್ನು ತರಬೇತುದಾರರನ್ನಾಗಿ ನೇಮಕ ಮಾಡಲು ಯೋಜನೆ ರೂಪಿಸಲಾಗಿದೆ. ಅಂದು ಮುಖ್ಯಮಂತ್ರಿ ಉದ್ಘಾಟಿಸಿದ ಬಳಿಕ ಆಯಾ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಚಾಲನೆ ನೀಡಲಾಗುತ್ತದೆ’ ಎಂದರು.

‘ಕ್ರೈಸ್‌ನಲ್ಲಿರುವ 800 ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಗಿದೆ. ಸಮಾಜಕಲ್ಯಾಣ ಇಲಾಖೆಯ ಸಂಸ್ಥೆಗಳಲ್ಲಿ ಮಕ್ಕಳಿಗೆ ಸಮವಸ್ತ್ರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರಿಗೂ ವಿತರಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT