ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ | ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ

Published 1 ಆಗಸ್ಟ್ 2023, 12:57 IST
Last Updated 1 ಆಗಸ್ಟ್ 2023, 12:57 IST
ಅಕ್ಷರ ಗಾತ್ರ

ಯಲ್ಲಾಪುರ: ‘ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ತರಾತುರಿಯಲ್ಲಿ ಕೆ. ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ಮುಂದಾಗಿದ್ದು, ಇದನ್ನು ಖಂಡಿಸಲಾಗುವುದು’ ಎಂದು ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ವರದಿ ಜಾರಿಯಿಂದ ಪಶ್ಚಿಮ ಘಟ್ಟಗಳನ್ನು ಒಳಗೊಂಡ 10 ಜಿಲ್ಲೆಗಳ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮದ ಮೇಲೆ ದುಷ್ಪರಿಣಾಮ ಬೀರಲಿದೆ. ಪಶ್ಚಿಮಘಟ್ಟಗಳ ತಪ್ಪಲಿನಲ್ಲಿ ಬದುಕು ಕಟ್ಟಿಕೊಂಡಿರುವ ಅನೇಕ ಬುಡಕಟ್ಟು ಜನಾಂಗಗಳ ಸಾಂಸ್ಕೃತಿಕ ಪರಂಪರೆಗಳು ಈ ಯೋಜನೆಯಿಂದ ನಶಿಸಲಿವೆ. ಈ ಬಗ್ಗೆ ಶಾಸಕರು ಮತ್ತು ಸಂಸದರೊಂದಿಗೆ ವಿವರವಾಗಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ’ ಪತ್ರಿಕಾ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT