ಶನಿವಾರ, ಫೆಬ್ರವರಿ 4, 2023
21 °C

ಶಿರಸಿ: ಪಿಎಫ್‌ಐ ಮುಖಂಡನ ಮನೆ ಮೇಲೆ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಇಲ್ಲಿನ ನೆಹರೂ ನಗರದಲ್ಲಿರುವ ಪಿಎಫ್‌ಐ ಮುಖಂಡರೊಬ್ಬರ ಮನೆ ಮೇಲೆ ಪೊಲೀಸರು, ತಹಶೀಲ್ದಾರ್ ದಾಳಿ ನಡೆಸಿದ್ದಾರೆ.

ಪಿ.ಎಫ್‌.ಐ. ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಅಬ್ದುಲ್ ಗಫೂರ್ ಪಾನಾವಾಲೆ (34) ಮನೆ ಮೇಲೆ ಸಂಜೆ ದಾಳಿ ನಡೆಸಿರುವ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

'ಅಬ್ದುಲ್ ಗಫೂರ್ ಪಿ.ಎಫ್.ಐ. ಕಚೇರಿಯನ್ನು ಮನೆಯಲ್ಲೇ ತೆರೆದು ಕೆಲಸ ನಿರ್ವಹಿಸುತ್ತಿರುವ ಸಂಶಯವಿತ್ತು. ಹೀಗಾಗಿ ಪರಿಶೀಲನೆ ನಡೆಸಲಾಗುತ್ತಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಕಳೆದ ಆರು ದಿನಗಳ ಹಿಂದಷ್ಟೆ ಗಫೂರ್ ವಿರುದ್ಧ ಪೊಲೀಸರು 107 ಕಲಂ ಅಡಿ ಪ್ರಕರಣ ದಾಖಲಿಸಿಕೊಂಡಿದ್ದರು. ಸದ್ಯ ಈತ ತಲೆಮರೆಸಿಕೊಂಡಿದ್ದಾನೆ.

ಡಿಎಸ್ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ, ತಹಶೀಲ್ದಾರ್ ಶ್ರೀಧರ ಮುಂದಲಮನಿ, ಮೂವತ್ತಕ್ಕೂ ಹೆಚ್ಚು ಸಿಬ್ಬಂದಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು