ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ | ನಿಷೇಧಿತ ಪ್ಲಾಸ್ಟಿಕ್ ದಾಸ್ತಾನು: ದಂಡ

Published 30 ಮೇ 2024, 14:24 IST
Last Updated 30 ಮೇ 2024, 14:24 IST
ಅಕ್ಷರ ಗಾತ್ರ

ಕಾರವಾರ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ದಾಸ್ತಾನು ಮಾಡಿದ ಭಟ್ಕಳ ಪಟ್ಟಣ ವ್ಯಾಪ್ತಿಯ 15ಕ್ಕೂ ಹೆಚ್ಚು ಅಂಗಡಿಗಳ ಮೇಲೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳ ನೇತತ್ವದ ತಂಡವು ಗುರುವಾರ ದಾಳಿ ನಡೆಸಿತು.

ಅಂಗಡಿಗಳಲ್ಲಿ ಪರಿಶೀಲನೆ ನಡೆಸಿ ತಂಡವು ಏಕ ಬಳಕೆ ಪ್ಲಾಸ್ಟಿಕ್‍ನಿಂದ ಸಿದ್ಧಪಡಿಸಲಾದ ಕ್ಯಾರಿ ಬ್ಯಾಗ್, ಸ್ಟ್ರಾ, ಕಪ್ ಸೇರಿದಂತೆ ಹಲವು ಸಾಮಗ್ರಿಗಳನ್ನು ವಶಕ್ಕೆ ಪಡೆಯಿತು. 150 ಕೆ.ಜಿ ತೂಕದ ನಿಷೇಧಿತ ಪ್ಲಾಸ್ಟಿಕ್ ವಸ್ತು ವಶಪಡಿಸಿಕೊಂಡಿದ್ದು, ಅಂಗಡಿ ಮಾಲೀಕರಿಗೆ ₹ 3,500 ರಷ್ಟು ದಂಡ ವಿಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ಉಪ ಪರಿಸರ ಅಧಿಕಾರಿ ಗಣಪತಿ ಹೆಗಡೆ, ಭಟ್ಕಳ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಸೋಜಿಯಾ ಸೋಮನ್, ವ್ಯವಸ್ಥಾಪಕ ವೆಂಕಟೇಶ ಅವರನ್ನು ಒಳಗೊಂಡಿದ್ದ ತಂಡವು ಕಾರ್ಯಾಚರಣೆ ನಡೆಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT