ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಮತಾಂತರ ಯತ್ನ, 6 ಮಂದಿ ಬಂಧನ

Published 30 ಜನವರಿ 2024, 23:30 IST
Last Updated 30 ಜನವರಿ 2024, 23:30 IST
ಅಕ್ಷರ ಗಾತ್ರ

ಶಿರಸಿ: ‘ಸಾರ್ವಜನಿಕರನ್ನು ಒತ್ತಾಯಪೂರ್ವಕವಾಗಿ ಮತಾಂತರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪದ ಮೇಲೆ ಆರು ಜನರ ತಂಡವನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

‘ಹಾವೇರಿ ಜಿಲ್ಲೆಯ ಪರಮೇಶ್ವರ ನಾಯ್ಕ, ಸುನಿತಾ ನಾಯ್ಕ, ಧನಂಜಯ ಶಿವಣ್ಣ, ಶಾಲಿನಿ ರಾಣಿ, ಮುಂಡಗೋಡ ಕ್ಯಾದಗಿಕೊಪ್ಪದ ಕುಮಾರ ಲಮಾಣಿ ಮತ್ತು ತಾರಾ ಲಮಾಣಿ ಬಂಧಿತರು’ ಎಂದು ಪೊಲೀಸರು ತಿಳಿಸಿದ್ದಾರೆ.

‘ತಾಲ್ಲೂಕಿನ ಶಿವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಗಳೆಮನೆಯಲ್ಲಿ ಆರು ಜನರ ತಂಡ ಆದರ್ಶ ನಾಯ್ಕ ಎಂಬುವರ ಮನೆಗೆ ಅಕ್ರಮವಾಗಿ ಪ್ರವೇಶಿಸಿ, ಕ್ರೈಸ್ತ ಸಮುದಾಯಕ್ಕೆ ಸೇರಲು ಒತ್ತಾಯಿಸಿದ್ದಾರೆ. ಮತಾಂತರದ ನಂತರ ನಮ್ಮ ಆರ್ಥಿಕ ಪರಿಸ್ಥಿತಿ ಮತ್ತು ಆರೋಗ್ಯ ಸ್ಥಿತಿ ಸುಧಾರಿಸಿದೆ. ಹಿಂದೂ ಧರ್ಮ ಬಿಟ್ಟು ಯೇಸುಗೆ ಪೂಜಿಸಿ ಎಂದು ಹೇಳಿದ್ದಾರೆ. ಆರೋಪಿಗಳು  ಹಿಂದೂ ದೇವರಿಗೆ ಅವಮಾನಿಸಿದ್ದು ಅಲ್ಲದೇ ಧಾರ್ಮಿಕ ಭಾವನೆಗೆ ಘಾಸಿ ಉಂಟು ಮಾಡಿರುವುದಾಗಿ  ಸ್ಥಳೀಯರು ನಮಗೆ ಮಾಹಿತಿ ನೀಡಿದರು. ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದೆವು’ ಎಂದು ಪಿಎಸ್‌ಐ ಪ್ರತಾಪ್ ಪಚ್ಚಪ್ಪಗೋಳ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT