ಗುರುವಾರ , ಡಿಸೆಂಬರ್ 1, 2022
25 °C

ಪೊಲೀಸ್ ವ್ಯಾನ್ ಪಲ್ಟಿ: ಐವರಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿ.ಎ.ಆರ್.) ಪೊಲೀಸ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವ್ಯಾನ್ ತಾಲ್ಲೂಕಿನ ತಾರಗೋಡ ಗ್ರಾಮದ ಬಳಿ ಬುಧವಾರ ಪಲ್ಟಿಯಾಗಿದ್ದು ಐವರು ಸಿಬ್ಬಂದಿ ಗಾಯಗೊಂಡಿದ್ದಾರೆ.

ಕೇಂದ್ರ ಸರ್ಕಾರ ಪಿ.ಎಫ್.ಐ. ಸಂಘಟನೆ ನಿಷೇಧಿಸಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತಾ ಕಾರ್ಯಕ್ಕೆ ಸಿಬ್ಬಂದಿ ಕಾರವಾರದಿಂದ ಶಿರಸಿಗೆ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಚಾಲಕನ ಸಹಿತ ಎಂಟು ಸಿಬ್ಬಂದಿ ಪ್ರಯಾಣಿಸುತ್ತಿದ್ದರು.

ಘಟನೆಯಲ್ಲಿ ಸಿಬ್ಬಂದಿ ಪರಮೇಶ್ವರ ಮಡಿವಾಳ, ರಾಮತೀರ್ಥ ಬೆಳಗಾವಿ ಎಂಬುವವರಿಗೆ ಹೆಚ್ಚಿನ ಪ್ರಮಾಣದ ಗಾಯಗಳಾಗಿದೆ. ರಾಮಚಂದ್ರ, ರಂಗನಾಥ, ಶೀತಲ್ ರಾಮಚಂದ್ರ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.