ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ವೇದಿಕೆ: ಶಾಸಕ ಭೀಮಣ್ಣ ನಾಯ್ಕ

Published 23 ಡಿಸೆಂಬರ್ 2023, 5:19 IST
Last Updated 23 ಡಿಸೆಂಬರ್ 2023, 5:19 IST
ಅಕ್ಷರ ಗಾತ್ರ

ಸಿದ್ದಾಪುರ: ‘ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ಪಟ್ಟಣದ ಸಿದ್ಧಿ ವಿನಾಯಕ ವಿದ್ಯಾ ಸಮುಚ್ಚಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಿಕ್ಷಣ ಇಲಾಖೆ, ಶಿರಸಿಯ ಉಪನಿರ್ದೇಶಕರ ಕಾರ್ಯಾಲಯ ಮತ್ತು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಶುಕ್ರವಾರ ನಡೆದ ಶಿರಸಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ಪಾಲಕರ ಜೊತೆ ಕಳೆಯುವ ಸಮಯಕ್ಕಿಂತ ಶಿಕ್ಷಕರ ಜೊತೆ ಕಳೆಯುವ ಸಮಯ ಹೆಚ್ಚು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅದಕ್ಕೆ ತಕ್ಕಂತೆ ಮಾರ್ಗದರ್ಶನ ನೀಡುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘನೀಯ. ತಾಲ್ಲೂಕಿನ, ಜಿಲ್ಲೆಯ ಪ್ರತಿಭೆಗಳು ಇಲ್ಲಿಯ ವೇದಿಕೆಗೆ ಸೀಮಿತವಾಗಿರದೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಮಿಂಚಿ ಉನ್ನತ ಸ್ಥಾನವನ್ನು ಅಲಂಕರಿಸಬೇಕು’ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಧನ್ಯ ಚಂದ್ರಶೇಖರ ನಾಯ್ಕ, ಹುಲ್ಕುತ್ರಿ  ಶಾಲೆಯ ಕೀರ್ತಿ ಮಂಜುನಾಥ ಗೌಡ ಅವರನ್ನು ಸನ್ಮಾನಿಸಲಾಯಿತು.

ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಬಸವರಾಜ ಮಾತನಾಡಿದರು.

ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಆರ್.ನಾಯ್ಕ, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ ನಾಯ್ಕ, ಶಿರಸಿ ಶೈಕ್ಷಣಿಕ ಜಿಲ್ಲೆಯ ಡಯಟ್ ಪ್ರಾಂಶುಪಾಲ ಎಂ.ಎಸ್.ಹೆಗಡೆ, ಶಿಕ್ಷಣ ಇಲಾಖೆಯ ಸದಾನಂದ ಸ್ವಾಮಿ, ಎಂ.ಎಸ್.ನಾಯ್ಕ ಮತ್ತು ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲಾ ಸಂಘದ ಅಧ್ಯಕ್ಷರು, ವಿವಿಧ ಇಲಾಖೆಗಳ, ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು. ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ.ನಾಯ್ಕ ವಂದಿಸಿದರು. ಟಿ.ಎನ್.ಭಟ್ ಮತ್ತು ಶೃತಿ ಕೆ. ಪಟಗಾರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT