ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ | ನಾಳೆ ಆಟೊ, ಟೆಂಪೊ ಬಂದ್

Published 10 ಸೆಪ್ಟೆಂಬರ್ 2023, 13:45 IST
Last Updated 10 ಸೆಪ್ಟೆಂಬರ್ 2023, 13:45 IST
ಅಕ್ಷರ ಗಾತ್ರ

ಕಾರವಾರ: ಬೆಂಗಳೂರಿನ ಖಾಸಗಿ ಸಾರಿಗೆ ಒಕ್ಕೂಟದಿಂದ ಕರೆ ನೀಡಲಾಗಿರುವ ಬಂದ್‍ಗೆ ಉತ್ತರ ಕನ್ನಡ ಜಿಲ್ಲೆಯ ಆಟೋ ಚಾಲಕ ಮಾಲಕರ ಸಂಘ, ಟೆಂಪೋ ಚಾಲಕ ಮಾಲಕರ ಸಂಘ ಮತ್ತು ಟ್ಯಾಕ್ಸಿ ಚಾಲಕರ ಮಾಲಕರ ಸಂಘದ ವತಿಯಿಂದ ಬೆಂಬಲ ನೀಡಲಾಗುವುದು ಎಂದು ಈ ಸಂಘಟನೆಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಟೋರಿಕ್ಷಾ ಚಾಲಕ ಮಾಲಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಿಲೀಪ್ ಜಿ ಅರ್ಗೇಕರ್, ‘ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳು ಮತ್ತು ಆಟೋರಿಕ್ಷಾ ಟೆಂಪೋ ಟ್ಯಾಕ್ಸಿ ನಂಬಿಕೊಂಡು ಜೀವನ ನಡೆಸುತ್ತಿರುವ ಬಹುಸಂಖ್ಯಾತರು ಬೀದಿಗೆ ಬಂದಿದ್ದಾರೆ. ಈ ಹಿನ್ನಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸೋಮವಾರ ಬಂದ್ ಗೆ ಕರೆ ನೀಡಲಾಗಿದೆ. ಹೋರಾಟದ ಭಾಗವಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಗರದಲ್ಲಿ ಆಟೋ, ಟ್ಯಾಕ್ಸಿ, ಟೆಂಪೋ ಬಂದ್ ಮಾಡಿ ಬೆಂಬಲ ನೀಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ.

‘ಶಕ್ತಿ ಯೋಜನೆಯಿಂದ ಸಂಕಷ್ಟ ಎದುರಿಸುತ್ತಿರುವ ಚಾಲಕರಿಗೆ ಜೀವನ ನಿರ್ವಹಣೆಗೆ ಭತ್ಯೆಯಾಗಿ ಪ್ರತಿ ತಿಂಗಳು ರಾಜ್ಯ ಸರ್ಕಾರ ₹10 ಸಾವಿರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT