ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಜಿಲ್ಲಾ ಗುರುಭವನ ನಿರ್ಮಾಣಕ್ಕೆ ಸಿದ್ಧತೆ

Last Updated 6 ಅಕ್ಟೋಬರ್ 2022, 13:07 IST
ಅಕ್ಷರ ಗಾತ್ರ

ಶಿರಸಿ: ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪಕ್ಕದಲ್ಲಿ ಜಿಲ್ಲಾ ಗುರುಭವನ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದ್ದು, ಜಾಗ ಸರಿಪಡಿಸುವ ಕೆಲಸ ಗುರುವಾರ ಆರಂಭಗೊಂಡಿದೆ.

ಶಿರಸಿ ಶೈಕ್ಷಣಿಕ ಜಿಲ್ಲೆಗೆ ಜಿಲ್ಲಾಮಟ್ಟದ ಗುರುಭವನ ನಿರ್ಮಾಣಕ್ಕೆ ಜಾಗ ಅಂತಿಮಗೊಳಿಸಿ ಹಲವು ವರ್ಷ ಕಳೆದರೂ ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ನಡೆದಿರಲಿಲ್ಲ. ಈ ಕುರಿತು ಸೆ.15 ರಂದು ‘ಗುರುಭವನ ನಿರ್ಮಾಣಕ್ಕೆ ಸಿಗದ ಗುರುಬಲ’ ಶೀರ್ಷಿಕೆ ಅಡಿ ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.

ಸರ್ಕಾರದ ಅನುದಾನಕ್ಕೆ ಕಾದಿದ್ದ ಶಿಕ್ಷಕರ ಸಂಘ ಸದ್ಯ ಶಿಕ್ಷಕರಿಂದ ಸಂಗ್ರಹಿಸಿದ ವಂತಿಗೆ ಮೊತ್ತದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಲು ಮುಂದಾಗಿದೆ.

‘ಗುರುಭವನ ನಿರ್ಮಾಣಕ್ಕೆ ₹ 5 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಸದ್ಯ ಶಿಕ್ಷಕರ ವಂತಿಗೆಯಿಂದ ಸಂಗ್ರಹವಾದ ₹ 75 ಲಕ್ಷ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುವುದು. ಬಳಿಕ ಹಂತ ಹಂತವಾಗಿ ಅನುದಾನ ಲಭ್ಯತೆ ಆಧರಿಸಿ ವಿಸ್ತರಣೆ ಮಾಡುತ್ತೇವೆ’ ಎಂದು ಶಿಕ್ಷಕರ ಸಂಘದ ಶಿರಸಿ ಜಿಲ್ಲಾ ಘಟಕದ ಅದ್ಯಕ್ಷ ನಾರಾಯಣ ನಾಯಕ ತಿಳಿಸಿದರು.

‘ಈಗ ಮಂಜೂರಾಗಿರುವ ಜಾಗ ಅರಣ್ಯ ಇಲಾಖೆಯ ಹೆಸರಿನಲ್ಲಿದ್ದು ಅದನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸಿಕೊಳ್ಳುವ ಪ್ರಯತ್ನ ನಡೆದಿದೆ. ಜಾಗದ ದಾಖಲೆಗಳು ಸರಿಯಾದ ಬಳಿಕ ಶಿಕ್ಷಕರ ಕಲ್ಯಾಣ ನಿಧಿಯಿಂದ ₹ 1 ಕೋಟಿ ಅನುದಾನ ದೊರೆಯುವ ನಿರೀಕ್ಷೆ ಇದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT