ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಂಕೋಲಾ | ಮೀನುಗಾರರು ಶೈಕ್ಷಣಿಕವಾಗಿ ಏಳ್ಗೆ ಸಾಧಿಸಿ– ಸಚಿವ ಮಂಕಾಳ ವೈದ್ಯ

ಹರಿಕಂತ್ರ ಮಹಾಜನ ಸಂಘದ ಸಮಾವೇಶದಲ್ಲಿ ಸಚಿವ ಮಂಕಾಳ ವೈದ್ಯ ಕರೆ
Published 1 ಜನವರಿ 2024, 14:19 IST
Last Updated 1 ಜನವರಿ 2024, 14:19 IST
ಅಕ್ಷರ ಗಾತ್ರ

ಅಂಕೋಲಾ: ‘ಮೀನುಗಾರರು ಕೇವಲ ಮೀನುಗಾರಿಕೆಗೆ ಸೀಮಿತವಾಗಿರದೆ, ಶಿಕ್ಷಣದ ಮೂಲಕ ಎಲ್ಲ ಕ್ಷೇತ್ರದಲ್ಲಿಯೂ ಪ್ರಗತಿ ಹೊಂದಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.

ಪಟ್ಟಣದ ಸತ್ಯಾಗೃಹ ಸ್ಮಾರಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಉತ್ತರ ಕನ್ನಡ ಜಿಲ್ಲಾ ಹರಿಕಂತ್ರ ಮಹಾಜನ ಸಂಘದ 18ನೇ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

‘ಹಿಂದೆ ಶಿಕ್ಷಣ ಪಡೆಯಲು ಹಣದ ಅಗತ್ಯ ಇತ್ತು. ಈಗ ಶಿಕ್ಷಣ ಪಡೆಯುವವರಿಗೆ ಎಲ್ಲ ರೀತಿಯ ಸೌಲಭ್ಯಗಳು ಇವೆ. ಯಾರೂ ಶಿಕ್ಷಣದಿಂದ ದೂರ ಉಳಿಯಬಾರದು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳು ಯಾವತ್ತಿಗೂ ನಿಲ್ಲಬಾರದು’ ಎಂದರು.

ಶಾಸಕ ಸತೀಶ ಸೈಲ್, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ, ಗೌರವಾಧ್ಯಕ್ಷ ಗಣಪತಿ ಮಾಂಗ್ರೆ, ಉತ್ತರ ಕನ್ನಡ ಜಿಲ್ಲಾ ಮೀನು ಮಾರಾಟಗಾರರ ಸಹಕಾರ ಫೆಡರೇಷನ್ ಅಧ್ಯಕ್ಷ ರಾಜು ತಾಂಡೇಲ, ವಕೀಲ ಮಹೇಶ ಹರಿಕಂತ್ರ ಮಾತನಾಡಿದರು.

ಶೈಕ್ಷಣಿಕವಾಗಿ ಸಾಧನೆಗೈದ 126 ವಿದ್ಯಾರ್ಥಿಗಳಿಗೆ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಮುದಾಯದ ಜನರನ್ನು ಸನ್ಮಾನಿಸಲಾಯಿತು.

ಸುಭಾಷ ಕೇಣಿಕರ, ಉದ್ಯಮಿ ಗಣೇಶ ಹರಿಕಂತ್ರ, ಹೆಸ್ಕಾಂ ಕಿರಿಯ ಎಂಜಿನಿಯರ್ ಗಿರಿಧರ ಹರಿಕಂತ್ರ, ಮಹಾಜನ ಸಂಘದ ಉಪಾಧ್ಯಕ್ಷ ಆರ್.ಎಸ್.ಆಂದ್ಲೆಮನೆ, ಪ್ರಧಾನ ಕಾರ್ಯದರ್ಶಿ ಟಿ.ಬಿ. ಹರಿಕಾಂತ, ತಾಲ್ಲೂಕು ಘಟಕದ ಕಾರ್ಯದರ್ಶಿ ಶ್ರೀಕಾಂತ ದುರ್ಗೇಕರ, ಶೈಕ್ಷಣಿಕ  ಸಮಿತಿ ಅಧ್ಯಕ್ಷ ಶಿವಾನಂದ ತಾಂಡೇಲ, ಅಂಕೋಲಾ ತಾಲ್ಲೂಕು ಘಟಕದ ಅಧ್ಯಕ್ಷ ಹೂವಾ ಖಂಡೇಕರ, ಜಗದೀಶ ನುಶಿಕೋಟೆ, ಸುರೇಶ ಹರಿಕಂತ್ರ, ಶಾಂತಾ ಹರಿಕಂತ್ರ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT