ಭಟ್ಕಳ: ರಾಜ್ಯದ ಕಾಂಗ್ರೆಸ್ ಸರ್ಕಾರದ ಧೋರಣೆ, ಬಸ್ ದರ ಏರಿಕೆ, ಗುತ್ತಿಗೆದಾರರು ಮತ್ತು ಅಧಿಕಾರಿಗಳ ಆತ್ಮಹತ್ಯೆ ಖಂಡಿಸಿ ಭಟ್ಕಳ ಬಿಜೆಪಿ ಮಂಡಲ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ಭಟ್ಕಳ ಉಪವಿಭಾಗಾಧಿಕಾರಿ ಡಾ. ನಯನಾ ಅವರಿಗೆ ಮನವಿ ಸಲ್ಲಿಸಿದರು.

ಭಟ್ಕಳ ಮಂಡಲಾಧ್ಯಕ್ಷ ಲಕ್ಷ್ಮೀ ನಾರಾಯಣ ನಾಯ್ಕ ರಾಜ್ಯದಲ್ಲಿ ಜನರು ನಾನಾ ರೀತಿಯ ಸಮಸ್ಯೆ ಎದುರಿಸುತ್ತಿರುವ ಸಂದರ್ಭದಲ್ಲೇ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಸ್ ದರವನ್ನು ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಮತ್ತಷ್ಟು ಹೊರೆ ಹಾಕಿದೆ. ಗ್ಯಾರಂಟಿ ಯೋಜನೆಯನ್ನು ಸಮರ್ಪಕವಾಗಿ ನಿಭಾಯಿಸಲಾಗದ ಸರ್ಕಾರ ಇದೀಗ ಬಸ್ ದರವನ್ನು ಶೇ 15ರಷ್ಟು ಏರಿಕೆ ಮಾಡಿ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಮುಂದಾಗಿದೆ. ಸರ್ಕಾರ ಗ್ಯಾರಂಟಿ ಯೋಜನೆಗೆ ಹಣ ಹೊಂದಿಸುವುದರದಲ್ಲೇ ಇದೆ ಹೊರತು, ಅಭಿವೃದ್ಧಿ ಕಾರ್ಯ ಮಾಡಲು ಮುಂದಾಗುತ್ತಿಲ್ಲ ಎಂದರು.

ಬೀದರಿನ ಗುತ್ತಿಗೆದಾರ ಸಚಿನ ಪಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಹೆಸರು ಕೇಳಿ ಬಂದಿದೆ. ಹೀಗಾಗಿ ಸಚಿವರು ತಕ್ಷಣ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದ್ರ ಆಗ್ರಹಿಸಿದರು.

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈಶ್ವರ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ ಮಾತನಾಡಿದರು. ಭಟ್ಕಳ ಉಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ತಹಶೀಲ್ದಾರ್ ನಾಗೇಂದ್ರ ಕೋಳಶೆಟ್ಟಿ ಮನವಿ ಸ್ವೀಕರಿಸಿದರು. ಭಟ್ಕಳ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯ್ಕ, ಒಬಿಸಿ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ನಾಯ್ಕ ಮೂಢಭಟ್ಕಳ, ಯುವ ಮೋರ್ಚಾ ಅಧ್ಯಕ್ಷ ಸುನೀಲ ಕಾಮತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.