ಆರೋಪಿತರಲ್ಲಿ ಯುವಕರೇ ಹೆಚ್ಚು
‘2019 ರಿಂದ ಜಿಲ್ಲೆಯಲ್ಲಿ ಈವರೆಗೆ ಮಾದಕ ದ್ರವ್ಯ ಸೇವನೆ ಸಾಗಾಟ ಮತ್ತು ಮಾರಾಟದಲ್ಲಿ ತೊಡಗಿದ್ದ 783 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಅವರ ಪೈಕಿ 575 ಮಂದಿ 18 ರಿಂದ 30 ವರ್ಷದ ವಯೋಮಾನದವರು. ಯುವ ಜನತೆಯನ್ನೇ ಗುರಿಯಾಗಿಸಿಕೊಂಡು ಅಕ್ರಮ ಚಟುವಟಿಕೆ ನಡೆದಿದೆ. ಹಿಂದಿನ 3 ವರ್ಷಗಳಲ್ಲಿ 126 ಪ್ರಕರಣಗಳಲ್ಲಿ 154 ಮಂದಿಯನ್ನು ಬಂಧಿಸಲಾಗಿದೆ. ಹೊರ ರಾಜ್ಯಗಳಿಂದ ಮಾದಕ ವಸ್ತುಗಳು ಸರಬರಾಜಾಗುತ್ತಿದ್ದು ಸ್ಥಳೀಯ ಪೆಡ್ಲರ್‌ಗಳ ಮೂಲಕ ಪ್ರವಾಸಿಗರಿಗೆ ಮತ್ತು ಸ್ಥಳೀಯವಾಗಿ ಸರಬರಾಜು ಆಗುತ್ತಿದೆ. ಇವುಗಳಿಗೆ ಕಡಿವಾಣ ಹಾಕಲಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ತಿಳಿಸಿದರು.