ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾರವಾರ | ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ

Published 16 ಮೇ 2024, 14:34 IST
Last Updated 16 ಮೇ 2024, 14:34 IST
ಅಕ್ಷರ ಗಾತ್ರ

ಕಾರವಾರ: ಜಿಲ್ಲೆಯ ಹಲವೆಡೆ ಗುರುವಾರ ಸಾಧಾರಣ ಮಳೆ ಸುರಿಯಿತು. ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ಬುಧವಾರ ತಡರಾತ್ರಿ ಬೃಹತ್ ಗಾತ್ರದ ಮರವೊಂದು ರಾಮನಗರ–ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿದ್ದಿದ್ದರಿಂದ ಕೆಲ ತಾಸುಗಳವರೆಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು.

ಕಾರವಾರ, ಶಿರಸಿ ಸೇರಿದಂತೆ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಗುಡುಗು ಸಹಿತ ಕೆಲ ನಿಮಿಷ ಮಳೆ ಸುರಿಯಿತು. ಹಳಿಯಾಳದಲ್ಲಿ ತಾಸುಗಳ ಕಾಲ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತಾದರೂ ಕೃಷಿಗೆ ಪೂರಕ ವಾತಾವರಣ ಸೃಷ್ಟಿಸಯಾಯಿತು. ಜೊಯಿಡಾದಲ್ಲಿ ಸತತ ನಾಲ್ಕನೇ ದಿನವೂ ಮಳೆ ಸುರಿದಂತಾಯಿತು.

ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.
ಜೊಯಿಡಾ ತಾಲ್ಲೂಕಿನ ರಾಮನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಮರ ಬಿದ್ದು ಸಂಚಾರಕ್ಕೆ ಅಡ್ಡಿಯುಂಟಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT