ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ಥಿತಿವಂತರು ‘ಗ್ಯಾರಂಟಿ’ ಲಾಭ ಕೈಬಿಡಲಿ: ಮಂಕಾಳ ವೈದ್ಯ

Published 19 ಜೂನ್ 2024, 14:02 IST
Last Updated 19 ಜೂನ್ 2024, 14:02 IST
ಅಕ್ಷರ ಗಾತ್ರ

ಕಾರವಾರ: ‘ಆರ್ಥಿಕವಾಗಿ ಸ್ಥಿತಿವಂತರಾದವರು ಗ್ಯಾರಂಟಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದರೆ, ಅದನ್ನು ನಿರಾಕರಿಸಿ ಬಡವರಿಗೆ ಅನುಕೂಲ ಕಲ್ಪಿಸಿಕೊಡಲಿ’ ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಹೇಳಿದರು.

‘ಬಡವರು, ಅಶಕ್ತರ ನೆರವಿಗೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಸೌಲಭ್ಯ ಕೆಲ ಸ್ಥಿತಿವಂತರಿಗೂ ಸಿಗುತ್ತಿದೆ. ಅಗತ್ಯ ಇಲ್ಲದಿದ್ದರೂ ಆ ಸೌಲಭ್ಯ ಪಡೆಯುವ ಬದಲು ಬಡವರಿಗೆ ಪರಿಣಾಮಕಾರಿಯಾಗಿ ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ಜನರಲ್ಲಿ ಕೋರುತ್ತೇನೆ’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT