ಹಳಿಯಾಳ: ಜೊಯಿಡಾ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಿ ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಜೊಯಿಡಾ ತಾಲ್ಲೂಕಿನ ಮೂಲ ಸೌಕರ್ಯ ಈಡೇರಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ಪ್ರಾಂತ ರೈತ ಸಂಘದ ಸದಸ್ಯರು ಹಾಗೂ ಜೊಯಿಡಾ ತಾಲ್ಲೂಕಿನ ವಿವಿಧ ಪಕ್ಷದ ಮುಖಂಡರು, ಪದಾಧಿಕಾರಿಗಳ ಜೊತೆ ಶನಿವಾರ ತಮ್ಮ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿದರು.

ಜೊಯಿಡಾ ತಾಲ್ಲೂಕಿಗೆ ಶಾಸಕ, ಸಚಿವರಾದಾಗಿನಿಂದ ಪ್ರಾಧಾನ್ಯತೆ ಮೇಲೆ ಹಲವು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದೇನೆ. ಪ್ರವಾಸೋದ್ಯಮಕ್ಕಾಗಿ ಉತ್ತೇಜನ ನೀಡಿ ಜೊಯಿಡಾ ತಾಲ್ಲೂಕು ಪ್ರವಾಸೋದ್ಯಮದಿಂದ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಕಳೆದ 30 ವರ್ಷಗಳಿಂದ ವಿದ್ಯುತ್ ಇಲ್ಲದೆ ಇರುವ ಜೊಯಿಡಾದಲ್ಲಿ 440 ಮನೆಗಳು, ದಾಂಡೇಲಿಯ 285, ಹಳಿಯಾಳದ 984 ಒಟ್ಟು 1,659 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ’ ಎಂದರು.

‘ಜೊಯಿಡಾ ತಾಲ್ಲೂಕಿನಲ್ಲಿ ಅತಿಯಾದ ಮಳೆಯಿಂದ ರಸ್ತೆಗಳು ಕುಸಿದು ಸಂಪರ್ಕ ಸ್ಥಗಿತಗೊಳ್ಳುತ್ತಿರುವ ಕಾರಣ ಎಲ್ಲೆಲ್ಲಿ ಭೂಕುಸಿತವಾಗುತ್ತದೆ ಅಲ್ಲೆಲ್ಲಾ ತಡೆಗೋಡೆ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿದೆ. ಮತ್ತು ಇತರ ಅಭಿವೃದ್ಧಿಗಾಗಿ ₹ 20 ಕೋಟಿ ಮಂಜೂರಾಗಿದೆ. ಶಿಕ್ಷಣ ಕ್ಷೇತ್ರದಲ್ಲಿಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಅಗ್ನಿಶಾಮಕ ದಳ ಸಹ ನಿರ್ಮಾಣವಾಗಿದೆ. ಕ್ಷೇತ್ರದಲ್ಲಿ ಸಾವಯವ ಕೃಷಿ ಉತ್ತೇಜನಕ್ಕಾಗಿ ₹5 ಕೋಟಿ ಮಂಜೂರು ಮಾಡಲು ಪ್ರಸ್ತಾವ ಸಲ್ಲಿಸಲಾಗಿದೆ. ಕಾರ್ಟೋಳಿ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಗೆ ಸೂಚಿಸಲಾಗಿದೆ. ಬಡವರ ಪರವಾಗಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಸಮಿತಿ ಜೊಯಿಡಾ ವತಿಯಿಂದ ಸಂಘದ ಕಾರ್ಯದರ್ಶಿ ಯಮುನಾ ಗಾಂವಕರ ಜೊಯಿಡಾದ ಸಮಗ್ರ ಅಭಿವೃದ್ಧಿಗಾಗಿ ಶಾಸಕರಿಗೆ ಮನವಿ ಸಲ್ಲಿಸಿದರು ಹಾಗೂ ಮನವಿಯ ಬಗ್ಗೆ ಚರ್ಚಿಸಿ ಶೀಘ್ರದಲ್ಲಿ ಸ್ಪಂದಿಸುವುದಾಗಿ ಶಾಸಕರು ಭರವಸೆ ನೀಡಿದರು.

ಮುಖಂಡರಾದ ಪ್ರೇಮಾನಂದ ವೇಳಿಪ, ದಿಗಂಬರ ದೇಸಾಯಿ, ವಿನಯ ದೇಸಾಯಿ, ರವಿ ರೇಡ್ಕರ, ಜೊಯಿಡಾ ತಹಶೀಲ್ದಾರ್ ಮಂಜುನಾಥ ಮುನವಳ್ಳಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭಾರತಿ ಎನ್, ಹೆಸ್ಕಾಂ ಅಧಿಕಾರಿ ದೀಪಕ ನಾಯಕ, ಸಾರಿಗೆ ಘಟಕಾಧಿಕಾರಿ ಹಾಗೂ ಜೊಯಿಡಾ ತಾಲ್ಲೂಕಿನ ವಿವಿಧ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.