ಶಿರಸಿ: ‘ಸೇಡಿನ ರಾಜಕಾರಣದ ಫಲವಾಗಿ ಜಾರಿ ನಿರ್ದೇಶನಾಲಯದವರು (ಇ.ಡಿ) ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇದು ಖಂಡನೀಯ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

‘ಕೇಂದ್ರ ಸರ್ಕಾರವು ಇ.ಡಿ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ಪುನಃ ಸೇಡಿನ ರಾಜಕಾರಣಕ್ಕೆ ಮುಂದಾಗಿದೆ. ಇದರಲ್ಲಿ ಯಾವುದೇ ಹುರುಳು ಇಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಸುಖಾಸುಮ್ಮನೆ ₹2 ಸಾವಿರ ಕೋಟಿ ಭ್ರಷ್ಟಾಚಾರವಾಗಿದೆ ಎಂದು ಕೆಳಮಟ್ಟದ ಆಪಾದನೆ ಮಾಡುತ್ತಿರುವುದು ಸರಿಯಲ್ಲ. ರಾಹುಲ್ ಗಾಂಧಿ ಕಾಂಗ್ರೆಸ್ ಶಕ್ತಿ ಬೆಳೆಸಲು ಪ್ರಯತ್ನಿಸುತ್ತಿರುವ ಕಾರಣ ಹೀಗೆ ದ್ವೇಷ ಮಾಡಲಾಗುತ್ತಿದೆ ಎಂಬ ಸಂಶಯ ಮೂಡಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.