ಶಿರಸಿ: ‘ಆರು ಬಾರಿ ಬಿಜೆಪಿ ಸಂಸದರ ಅಧಿಕಾರದಲ್ಲಿದ್ದರೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿನ ಹಲವು ಜ್ವಲಂತ ಸಮಸ್ಯೆಗಳು ಇಂದಿಗೂ ಜೀವಂತವಾಗಿವೆ. ಅವುಗಳ ಬಗ್ಗೆ ಹಾಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಧಾನಿ ಗಮನಕ್ಕೆ ತರಬೇಕು’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಒತ್ತಾಯಿಸಿದರು.

ನಗರದಲ್ಲಿ ಶನಿವಾರ ಪತ್ರಕರ್ತರ ಜತೆ ಮಾತನಾಡಿದ ಅವರು, ‘ಲೋಕಸಭಾ ಕ್ಷೇತ್ರ ಈವರೆಗೆ ಬಿಜೆಪಿಯ ಅಧಿಕಾರದಲ್ಲಿದೆ. ಆದರೂ ಇಲ್ಲಿನ ಸಮಸ್ಯೆಗಳಿಗೆ ಮುಕ್ತಿ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಗಮನ ಸೆಳೆಯುವ ಕಾರ್ಯವನ್ನು ಕಾಗೇರಿ ಅವರು ಮಾಡಬೇಕು. ಇಲ್ಲಿನ ನಿರುದ್ಯೋಗ ಸಮಸ್ಯೆ, ಸಂಪರ್ಕ ತೊಡಕು, ಭೂಮಿ ಹಕ್ಕಿನ ತಾಪತ್ರಯಗಳ ಬಗ್ಗೆ ತಿಳಿವಳಿಕೆ ನೀಡಿ ಪರಿಹಾರ ಸೂಚಿಸಬೇಕು’ ಎಂದರು.

ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡುತ್ತೇವೆ ಎಂದು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವೆ. ಆದರೆ ಬಿಜೆಪಿಗರು ಎಲ್ಲದರಲ್ಲೂ ಹಿಂದುತ್ವದ ಅಜೆಂಡಾ ತೂರಿಸಲು ಯತ್ನಿಸುತ್ತಾರೆ. ಇದು ಬಿಜೆಪಿಯ ಮನಸ್ಥಿತಿಯಾಗಿದೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ನೀಡುವ ಮಾತನಾಡಿದೆಯೇ ವಿನಾ ಧರ್ಮ, ಜಾತಿಗಳ ಒಡೆದಾಳುವ ಉದ್ದೇಶ ಹೊಂದಿಲ್ಲ ಎಂದ ಅವರು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಶಾಸಕ ಭೀಮಣ್ಣ ನಾಯ್ಕ, ಪ್ರಮುಖರಾದ ವೆಂಕಟೇಶ ಹೆಗಡೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.