ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ವಸ್ತು ಪ್ರದರ್ಶನ: ರಾಷ್ಟ್ರಮಟ್ಟಕ್ಕೆ ಚಂದನಾ

Published 28 ಡಿಸೆಂಬರ್ 2023, 13:55 IST
Last Updated 28 ಡಿಸೆಂಬರ್ 2023, 13:55 IST
ಅಕ್ಷರ ಗಾತ್ರ

ಕಾರವಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಬುಧವಾರ ನಡೆದಿದ್ದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಸಿದ್ದಾಪುರ ತಾಲ್ಲೂಕಿನ ಕಾವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಚಂದನಾ ಚೌಹಾಣ್ ಪ್ರದರ್ಶಿಸಿದ ವಿಜ್ಞಾನ ಮಾದರಿ ಪ್ರಥಮ ಸ್ಥಾನ ಪಡೆದಿದೆ.

‘ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಚಂದನಾ ಚಂದ್ರಯಾನ–3 ಮಾದರಿಯನ್ನು ಸಿದ್ಧಪಡಿಸಿ ಪ್ರದರ್ಶಿಸಿದ್ದರು. ಅವರಿಗೆ ವಿಜ್ಞಾನ ಶಿಕ್ಷಕ ಸತ್ಯನಾರಾಯಣ ವೆರ್ಣೇಕರ ಮಾರ್ಗದರ್ಶನ ಮಾಡಿದ್ದರು. ವಿದ್ಯಾರ್ಥಿನಿಯು ಪ್ರದರ್ಶಿಸಿದ ಮಾದರಿಯು ರಾಷ್ಟ್ರಮಟ್ಟದಲ್ಲಿ ಪ್ರದರ್ಶನಕ್ಕೆ ಆಯ್ಕೆಯಾಗಿದೆ’ ಎಂದು ಶಾಲೆಯ ಮುಖ್ಯ ಶಿಕ್ಷಕ ವೀರಣ್ಣ ನೂರಂದನವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT