ಕುಮಟಾ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ವಾರ್ಡನ್ ಶಂಕರ ಪೋಳ (30) ಎಂಬುವರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಒಂದು ವರ್ಷದಿಂದ ಆರೋಪಿಯು ತನ್ನೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಇದರ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಮತ್ತು ಸ್ಥಳೀಯ ಮಹಿಳಾ ಸಾಂತ್ವನ ಕೇಂದ್ರದ ಗಮನಕ್ಕೆ ತರಲಾಗಿತ್ತೆಂದು ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.