ಹೊನ್ನಾವರ (ಉತ್ತರ ಕನ್ನಡ): ಉದ್ದೇಶಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಟ್ಟು, ವಿದ್ಯುತ್ ಕೊರತೆ ನೀಗಿಸಲು ಬದಲಿ ಇಂಧನ ಮೂಲಗಳ ಮೊರೆ ಹೋಗಬೇಕು ಎಂದು ಪಟ್ಟಣದಲ್ಲಿ ಮಂಗಳವಾರ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ.

ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ನೇತೃತ್ವದಲ್ಲಿ ‘ಶರಾವತಿ ಉಳಿಸಿ ಹೋರಾಟ ಸಮಿತಿ’ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಯೋಜನೆ ಶಾಶ್ವತ ರದ್ದತಿಗೆ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಮಂಡಿಸಲಾಯಿತು.

‘ಶರಾವತಿ ನದಿ ನೀರನ್ನು ಪರಿಸರ ನಾಶದ ಯೋಜನೆಗೆ ಬಳಸಿಕೊಳ್ಳುವುದು ತಾಯಿಯ ರಕ್ತ ಕುಡಿದಷ್ಟೇ ಮಹಾಪಾಪ’ ಎಂದು ರಾಘವೇಶ್ವರ ಶ್ರೀ ಅಭಿಪ್ರಾಯಪಟ್ಟರು.

‘ಉತ್ತರ ಕನ್ನಡ ಜಿಲ್ಲೆಯ ಪರಿಸರ ಧಾರಣ ಸಾಮರ್ಥ್ಯದ ಅಧ್ಯಯನ ನಡೆಸದೇ, ಇಲ್ಲಿ ಯಾವುದೇ ಬೃಹತ್ ಯೋಜನೆ ಹೇರಿಕೆ ಮಾಡಬಾರದು’ ಎಂಬ ಒತ್ತಾಯ ಮಾಡಲಾಯಿತು.

ಮೀನುಗಾರಿಕೆ ಸಚಿವ ಮಂಕಾಳ ವೈದ್ಯ, ಶಾಸಕ ದಿನಕರ ಶೆಟ್ಟಿ, ಬಂಗಾರಮಕ್ಕಿ ಕ್ಷೇತ್ರದ ಧರ್ಮದರ್ಶಿ ಮಾರುತಿ ಗುರೂಜಿ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.