ಶಿರಸಿ: ‘ಮಾಜಿ ಉಪಪ್ರಧಾನಿ ಬಾಬು ಜಗಜೀವನ ರಾಂ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ತಾಲ್ಲೂಕು ಆಡಳಿತವು ಕಾಟಾಚಾರಕ್ಕೆ ನಡೆಸಿ ಅವಮಾನಿಸಿದೆ’ ಎಂದು ವಿವಿಧ ದಲಿತ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಕೀಲ ಬಸವರಾಜ ದೊಡ್ಮನಿ, ‘ಏ.5ರಂದು ಬೆಳಿಗ್ಗೆ 10ಕ್ಕೆ ನಿಗದಿಯಾಗಿದ್ದ ಕಾರ್ಯಕ್ರಮವು ಅಧಿಕಾರಿಗಳ ಬೇಜವಾಬ್ದಾರಿಯಿಂದ ಒಂದೂವರೆ ಗಂಟೆ ತಡವಾಗಿ ಆರಂಭವಾಗಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಇಒ ಗೈರಾಗಿರುವುದು ಅಕ್ಷಮ್ಯ ಅಪರಾಧ’ ಎಂದರು.

ಭೀಮ ಘರ್ಜನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಅರ್ಜುನ ಮಿಂಟಿ ಮಾತನಾಡಿ, ‘ಆಹ್ವಾನ ಪತ್ರಿಕೆಯಲ್ಲಿ ಹೆಸರಿದ್ದ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮಕ್ಕೆ ಬಾರದೆ ನಿರ್ಲಕ್ಷ್ಯ ತೋರಿದ್ದಾರೆ. ದಲಿತ ನಾಯಕ ಎಂಬ ಕಾರಣಕ್ಕೆ ಈ ರೀತಿ ಅವಮಾನಿಸಲಾಗಿದೆಯೇ? ಎಂದು ಪ್ರಶ್ನಿಸಿದ ಅವರು, ‘ಲೋಪ ಎಸಗಿದ ಅಧಿಕಾರಿಗಳನ್ನು ಕೂಡಲೇ ವಜಾಗೊಳಿಸಬೇಕು’ ಎಂದು ಒತ್ತಾಯಿಸಿದರು.

ಪ್ರಮುಖರಾದ ಬಾಲಚಂದ್ರ ರೇವಣಕರ, ರತ್ನಾಕರ ರೇವಣಕರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-20-2093706665

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.