ಶಿರಸಿ: ತಾಲ್ಲೂಕಿನ ಸದಾಶಿವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಳಗಾರ ಗ್ರಾಮದಲ್ಲಿ ಕಾಡುಪ್ರಾಣಿಯೊಂದು ಹಸುವಿನ ಕರುವಿನ ಮೇಲೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ನಡೆದಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.

ಬಾಳಗಾರ ಗ್ರಾಮದ ನಿವಾಸಿ ಗಂಗಾ ನಾಗರಾಜ ನಾಯ್ಕ ಎನ್ನುವವರಿಗೆ ಸೇರಿದ ಆಕಳು ಕರುವು ಕಾಡುಪ್ರಾಣಿಯ ದಾಳಿಗೆ ತುತ್ತಾಗಿದೆ. ಕಳೆದ ಎರಡು ತಿಂಗಳಿನಿಂದ ಈ ಭಾಗದ ಅರಣ್ಯ ಹಾಗೂ ಜನವಸತಿ ಪ್ರದೇಶದ ಆಸುಪಾಸಿನಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಇದೀಗ ಜಾನುವಾರುಗಳ ಮೇಲೆ ದಾಳಿ ನಡೆದಿರುವುದು ಈ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ. ಘಟನಾ ಸ್ಥಳಕ್ಕೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಾಗರಾಜ ಶೆಟ್ಟಿ ಭೇಟಿ ನೀಡಿ, ಹಸು ಕಳೆದುಕೊಂಡ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಈ ಭಾಗದಲ್ಲಿ ನಿರಂತರವಾಗಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗುತ್ತಿದೆ. ಜಾನುವಾರುಗಳನ್ನು ಕಳೆದುಕೊಂಡ ಬಡ ಕುಟುಂಬಕ್ಕೆ ಅರಣ್ಯ ಇಲಾಖೆಯು ತಕ್ಷಣವೇ ಸೂಕ್ತ ಪರಿಹಾರ ಧನವನ್ನು ವಿತರಿಸಬೇಕು. ಯಾವುದೇ ದೊಡ್ಡ ಮಟ್ಟದ ಅನಾಹುತಗಳು ಸಂಭವಿಸುವ ಮೊದಲೇ ಅರಣ್ಯ ಇಲಾಖೆಯು ಎಚ್ಚೆತ್ತುಕೊಂಡು ಬೀಡುಬಿಟ್ಟಿರುವ ಹುಲಿಯನ್ನು ಸೆರೆಹಿಡಿಯಲು ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮಸ್ಥರು ಕೂಡ ಕಾಡುಪ್ರಾಣಿಗಳ ಭಯದಿಂದ ಸಂಜೆಯ ವೇಳೆಗೆ ಹೊರಬರಲು ಹಿಂದೇಟು ಹಾಕುತ್ತಿದ್ದು, ಇಲಾಖೆಯು ಶೀಘ್ರವಾಗಿ ಗಸ್ತು ನಡೆಸಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-20-1918104283

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.