ಶಿರಸಿ: ಬೇಡ್ತಿ ಮತ್ತು ಅಘನಾಶಿನಿ ನದಿಗಳ ಸಂರಕ್ಷಣೆಗಾಗಿ ನಡೆಯುತ್ತಿರುವ ನಿರಂತರ ಹೋರಾಟ ಹಾಗೂ ವ್ಯಾಪಕ ಅಭಿಯಾನಗಳ ಭಾಗವಾಗಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ವಿಶೇಷ ಸಭೆಯನ್ನು ಏ.20ರಂದು ಆಯೋಜಿಸಲಾಗಿದೆ. ನಗರದ ಕದಂಬ ಮಾರ್ಕೆಟಿಂಗ್ ಸಭಾಭವನದಲ್ಲಿ ಮಧ್ಯಾಹ್ನ 3.30ಕ್ಕೆ ಸಭೆ ನಡೆಯಲಿದೆ.

ಸ್ವರ್ಣವಲ್ಲಿ ಮಹಾಸಂಸ್ಥಾನದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಈ ಸಭೆ ಜರುಗಲಿದೆ. ಜಲ ಸಂಪನ್ಮೂಲ ತಜ್ಞ ಬೆಂಗಳೂರಿನ ವಿ.ಆರ್.ಹೆಗಡೆ ಶೀಗೆಮನೆ ಸಭೆಯಲ್ಲಿ ಉಪಸ್ಥಿತರಿರಲಿದ್ದು, ಬೇಡ್ತಿ-ವರದಾ ಸೇರಿದಂತೆ ವಿವಿಧ ನೀರಾವರಿ ಯೋಜನೆಗಳ ವಿಫಲತೆ ಹಾಗೂ ಅವುಗಳ ವಾಸ್ತವಿಕ ಚಿತ್ರಣದ ಕುರಿತು ಮಾಹಿತಿ ಮಂಡಿಸುವರು. ಇದೇ ಸಂದರ್ಭದಲ್ಲಿ ಬಾಲಚಂದ್ರ ಸಾಯಿಮನೆ ಹಾಗೂ ಅಶ್ವಿನಿ ಕುಮಾರ ಅವರು ಅಘನಾಶಿನಿ ಅಪ್ಪೆಮಿಡಿ ಪಾದಯಾತ್ರೆಯ ಕುರಿತಾದ ವಿಶೇಷ ವೀಡಿಯೋ ಪ್ರದರ್ಶನ ನಡೆಸಿಕೊಡುವರು.

ದೆಹಲಿ, ಬೆಂಗಳೂರು, ಹುಬ್ಬಳ್ಳಿ ಸೇರಿದಂತೆ ವಿವಿಧೆಡೆ ನಡೆದ ಅಭಿಯಾನಗಳು ಹಾಗೂ ಹೋರಾಟದ ಪ್ರಚಲಿತ ವಿದ್ಯಮಾನಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು, ಮಾತೃಮಂಡಳಿ ಹಾಗೂ ವಿವಿಧ ವಿಭಾಗಗಳ ಸಂಯೋಜಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಚಾಲಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-20-1435912306

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.