ಶಿರಸಿ: ‘ಶಿಕ್ಷಣ ಎಂಬುದು ಕೇವಲ ಶ್ರೀಮಂತರ ಸ್ವತ್ತಲ್ಲ, ಎಲ್ಲ ವರ್ಗದವರಿಗೂ ಸಮಾನ ಶಿಕ್ಷಣ ದೊರೆತು ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲ್ಲೂಕಿನ ಕುಳವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿಪ್ಪುನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಖ್ಯ ದ್ವಾರದಿಂದ ವಸತಿ ನಿಲಯದವರೆಗೆ ₹20 ಲಕ್ಷ ಹಾಗೂ ಟಿಪ್ಪುನಗರ ರಸ್ತೆ ಸುಧಾರಣೆಗೆ ₹30 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಈವರೆಗೆ ರಸ್ತೆ ಕಾಣದ ಗ್ರಾಮಗಳಿಗೆ ಅನುದಾನ ಮಂಜೂರು ಮಾಡಲಾಗಿದೆ. ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಸರ್ಕಾರಿ ಹಣವನ್ನು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಕಾಮಗಾರಿ ನಡೆಸಬೇಕು ಎಂದು ಅವರು, ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಮುಂದಿನ ದಿನಗಳಲ್ಲಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ತರುವ ಪ್ರಯತ್ನ ಮಾಡುವುದಾಗಿ ಅವರು ಭರವಸೆ ನೀಡಿದರು.

ಕಾಲೇಜು ಸಮಿತಿ ಉಪಾಧ್ಯಕ್ಷ ಎಸ್.ಎಂ.ಕಮನಳ್ಳಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ಸದಸ್ಯರಾದ ಎ.ಕೆ.ನಾಯ್ಕ, ನಂದಕುಮಾರ ಜೋಗಳೇಕರ, ಪ್ರತಿಭಾ ಭಟ್ ಬೆಳಖಂಡ, ಸಿ.ಡಿ.ನಾಯ್ಕ, ಕುಳವೆ ಪಂಚಾಯಿತಿ ಮಾಜಿ ಸದಸ್ಯರಾದ ಸಂದೇಶ ಭಟ್, ಶ್ರೀನಾಥ ಶೆಟ್ಟಿ, ಘಟಕಾಧ್ಯಕ್ಷ ಮಂಜುನಾಥ ಭಟ್ ಬೆಳಖಂಡ ಹಾಗೂ ಬೂತ್ ಅಧ್ಯಕ್ಷ ತಿಮ್ಮ ನಾಯ್ಕ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-20-768281837

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.