ಶಿರಸಿ: ಇಲ್ಲಿನ ಗಣೇಶನಗರದ ಅಂಗನವಾಡಿ ನಂ.5ರ ಚಾವಣಿ ಎತ್ತರಿಸುವ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಕ್ರಿಯಾ ಯೋಜನೆಯಲ್ಲಿ ಸೇರಿಸಲು ತೀರ್ಮಾನಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಚೆಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಪ್ರಕಟವಾದ ‘ಶೆಡ್ ಅಡಿ ಬೆವರುತ್ತಿವೆ ಎಳೆಯ ಜೀವಗಳು’ ವರದಿ ಪ್ರಕಟವಾದ ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

‘ಗಣೇಶನಗರ-5ರ ಅಂಗನವಾಡಿ ಕೇಂದ್ರವು ಕಳೆದ 17 ವರ್ಷಗಳಿಂದ ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ನಡೆಯುತ್ತಿದೆ. ಇಲ್ಲಿ ಕುಡಿಯುವ ನೀರು, ವಿದ್ಯುತ್, ಫ್ಯಾನ್ ಹಾಗೂ ಶೌಚಾಲಯದಂತಹ ಮೂಲ ಸೌಕರ್ಯಗಳಿದ್ದು, ಹುತ್ಗಾರ ಗ್ರಾಮ ಪಂಚಾಯಿತಿಯಿಂದ ಈಚೆಗಷ್ಟೇ ಸುಣ್ಣಬಣ್ಣ ಹಾಗೂ ದುರಸ್ತಿ ಕಾರ್ಯಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

‘ಬಾಲವಿಕಾಸ ಸಮಿತಿ ಹಾಗೂ ಪಾಲಕರು ಇದೇ ಕಟ್ಟಡದಲ್ಲಿ ಕೇಂದ್ರ ಮುಂದುವರಿಸಲು ಸಮ್ಮತಿಸಿದ್ದಾರೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-20-1507619235

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.