ಶಿರಸಿ: ‘ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಮುದಾಯದ ಪಾತ್ರ ಅತ್ಯಂತ ದೊಡ್ಡದಿದೆ. ಆರೋಗ್ಯ ರಕ್ಷಣೆ ಎನ್ನುವುದು ಕೇವಲ ಇಲಾಖೆಯ ಕೆಲಸವಲ್ಲ, ಅದು ನಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಧುಕರ ಪಾಟೀಲ ಹೇಳಿದರು.

ನಗರದ ಸಾಮ್ರಾಟ್ ಹೋಟೆಲ್ ಸಭಾಭವನದಲ್ಲಿ ಸೋಮವಾರ ಆಯೋಜಿಸಿದ್ದ ಜನ ಆರೋಗ್ಯ ಸಮಿತಿ ಮತ್ತು ಮಹಿಳಾ ಆರೋಗ್ಯ ಸಮಿತಿ ಸದಸ್ಯರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭಾರತಿ ಹೊಸಮನಿ ಮಾತನಾಡಿದರು.

‘ಆರೋಗ್ಯವೇ ಭಾಗ್ಯ ಎಂಬ ಮಾತಿನಂತೆ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಕಡೆಗೆ ವಿಶೇಷ ಗಮನ ಹರಿಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ‘ ಎಂದರು.

ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಧುಕೇಶ್ವರ ರಾಯ್ಕರ, ಜನ ಆರೋಗ್ಯ ಸಮಿತಿ ಸದಸ್ಯ ಖಾದರ್ ಆನವಟ್ಟಿ, ಐಸಿಡಿಎಸ್ ಮೇಲ್ವಿಚಾರಕಿ ವೀಣಾ ಸಿರ್ಸಿಕರ, ಭಾರತಿ ಶೆಟ್ಟಿ ಅವರು ವಿಷಯ ಮಂಡಿಸಿದರು. ತರಬೇತಿ ಅವಧಿಯಲ್ಲಿ ರೂಪಾ ನಾಯ್ಕ, ಶ್ರುತಿ ನಾಯ್ಕ ಹಾಗೂ ಕ್ಷಯರೋಗ ಮೇಲ್ವಿಚಾರಕ ಉದಯಶಂಕರ ಅವರು ಸಮಿತಿಗಳ ಕಾರ್ಯವೈಖರಿ, ಸದಸ್ಯರ ಜವಾಬ್ದಾರಿಗಳು ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಗೌರಿ ನಾಯ್ಕ ಸ್ವಾಗತಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವೀರಯ್ಯ ಹಿರೇಮಠ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-20-1251168039

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.