ಶಿರಸಿ: ‘ತಾಲ್ಲೂಕಿನ ಕಾಳಂಗಿ ಕ್ರಾಸ್ನಿಂದ ರಾಮಾಪುರದವರೆಗೆ ಮರು ಡಾಂಬರೀಕರಣ ಕಾಮಗಾರಿಗಾಗಿ ಅನುದಾನ ಬಿಡುಗಡೆಯಾಗಿದ್ದರೂ, ಗುತ್ತಿಗೆದಾರ ಕೆಲಸ ಪ್ರಾರಂಭಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಕೂಡಲೇ ರಸ್ತೆ ನಿರ್ಮಾಣ ಮಾಡದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ಸಾಮಾಜಿಕ ಕಾರ್ಯಕರ್ತ ಯುವರಾಜ ಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ವದ್ದಲದಿಂದ ಒಂದೂವರೆ ಕಿಲೋಮೀಟರ್ ರಸ್ತೆಯ ಮರು ಡಾಂಬರೀಕರಣಕ್ಕಾಗಿ ₹1 ಕೋಟಿ ಮಂಜೂರಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು. ಅದರಂತೆ ನಾಲ್ಕು ತಿಂಗಳ ಹಿಂದೆಯೇ ಬಂದ ಗುತ್ತಿಗೆದಾರ, ಈ ರಸ್ತೆಯ ಕೆಲವು ಭಾಗಗಳನ್ನು ಜೆಸಿಬಿ ಯಂತ್ರದ ಮುಖಾಂತರ ಅಗೆದು ಹಾಕಿದ್ದಾರೆ. ಆದರೆ, ಅದಾದ ನಂತರ ಡಾಂಬರೀಕರಣ ಮಾಡದೇ ಕಾಮಗಾರಿಯನ್ನು ಹಾಗೆಯೇ ಅರ್ಧಕ್ಕೆ ಕೈಬಿಟ್ಟಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಪ್ರಸ್ತುತ ರಸ್ತೆ ಸಂಪೂರ್ಣ ಅಗೆದು ಹಾಕಿರುವುದರಿಂದ ಸಂಚಾರ ದುಸ್ತರವಾಗಿದ್ದು, ನಿತ್ಯ ಈ ರಸ್ತೆಯನ್ನೇ ನಂಬಿಕೊಂಡಿರುವ ನೂರಾರು ವಾಹನ ಸವಾರರು ಮತ್ತು ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಲೋಕೋಪಯೋಗಿ ಇಲಾಖೆಯು ತಕ್ಷಣವೇ ಗಮನಹರಿಸಿ, ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಇಲಾಖೆಯ ವಿರುದ್ಧ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-20-1879574701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.