ಶಿರಸಿ: ನಗರದ ರಂಗಧಾಮದಲ್ಲಿ ವಿದ್ಯಾಧರ ಕನ್ನಡ ಪ್ರತಿಷ್ಠಾನ ಹಾಗೂ ಪ್ರಜ್ವಲ ಟ್ರಸ್ಟ್ ಸಹಯೋಗದೊಂದಿಗೆ ಏ.11ರಂದು ಕನ್ನಡ ನುಡಿತೇರು-ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ.

ಮಾತೋಶ್ರೀ ಜಾನಕಿಬಾಯಿ ರಂಗರಾವ ಮುತಾಲಿಕ ದೇಸಾಯಿ ಅವರ ಸ್ಮರಣಾರ್ಥ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಾಹಿತ್ಯ, ಸಂಗೀತ ಹಾಗೂ ಕಲಾಚಟುವಟಿಕೆಗಳು ಇರಲಿದೆ. ಅಂದು ಬೆಳಿಗ್ಗೆ 10ಕ್ಕೆ ವಿದ್ಯಾಧರ ಮುತಾಲಿಕ ದೇಸಾಯಿ ಅವರ ವೈವಿಧ್ಯ ಲೇಖನ ಸಂಗ್ರಹ ಹಾಗೂ ಬಿಂದು ಹೆಗಡೆ ಅವರ ಚಳಿಗಾಲದ ಚಿಮಣಿ ಕಥಾಸಂಕಲನ ಬಿಡುಗಡೆಗೊಳ್ಳಲಿವೆ. ಇದೇ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೆ.ಇಮಾಮಸಾಬ ಕೊಳೂರು ಅವರಿಗೆ ತ್ರಿಶೂಲೇಶ್ವರ ಶ್ರೀನಿವಾಸ ರಂಗ ತಪಸ್ವಿ ಪ್ರಶಸ್ತಿ, ಸಾವಿತ್ರಿ ಗ. ಹೆಗಡೆ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಸೇರಿದಂತೆ ಒಟ್ಟು 12 ಸಾಧಕರಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಗೀತಾ ಪಾಟೀಲ, ಸಾಹಿತಿ ಸುರೇಶ ಕೊರಕೊಪ್ಪ, ಸ.ರಾ.ಸುಳಕೋಡೆ ಭಾಗವಹಿಸುವರು. ಸುನೀತಾ ಪ್ರಕಾಶ ದಾವಣೆಗೆರೆ ಅವರ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಲಿದ್ದು, ದಾಸವಾಣಿ ಹಾಗೂ ಸಮೂಹ ಗೀತೆ ಸ್ಪರ್ಧೆಗಳು ನಡೆಯಲಿವೆ. ಸಾಂಸ್ಕೃತಿಕ ವಿಭಾಗದಲ್ಲಿ ವಿದುಷಿ ಶ್ಯಾಮಲಾ ಪ್ರಕಾಶ ಅವರಿಂದ ಅನುಭಾವ ಸಾಹಿತ್ಯ ವಿಹಾರ, ಅಜಯ ವರ್ಗಾಸರ ಅವರಿಂದ ಹಾರ್ಮೋನಿಯಂ ಸೋಲೋ ಹಾಗೂ ಶಿರಸಿಯ ಎಂ.ಇ.ಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರಸ್ತುತ ಎಂಬ ಕಿರು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಜ್ವಲ ಟ್ರಸ್ಟ್ ಅಧ್ಯಕ್ಷೆ ಬಿಂದು ಹೆಗಡೆ ಹಾಗೂ ಸಂಘಟಕಿ ವಿದ್ಯಾಧರ ಮುತಾಲಿಕ ದೇಸಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260407-20-357500812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.