ಶಿರಸಿ: ನಗರದ ಕವಿ ಕಾವ್ಯ ಬಳಗದ 18ನೇ ವರ್ಷದ ಸ್ನೇಹ ಸಮ್ಮಿಲನ ಮತ್ತು ಪುಸ್ತಕ ಲೋಕಾರ್ಪಣೆ ಸಮಾರಂಭವು ಏ. 3ರಂದು ಬೆಳಿಗ್ಗೆ 10ರಿಂದ ಮಧುವನದ ಆರಾಧನಾ ಸಭಾಂಗಣದಲ್ಲಿ ನಡೆಯಲಿದೆ.

ಹಿರಿಯ ಸಾಹಿತಿ ಆರ್.ಡಿ.ಹೆಗಡೆ ಆಲ್ಮನೆ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಗಂಗಾಧರ ಕೊಳಗಿ ಉದ್ಘಾಟಿಸುವರು. ಪತ್ರಕರ್ತ ನಾಗರಾಜ ವೈದ್ಯ ಅವರ ಎಐ ಭಗವದ್ಗೀತೆ ಕೃತಿ ಲೋಕಾರ್ಪಣೆಗೊಳ್ಳಲಿದೆ. ನಂತರ ಎನ್.ಆರ್.ರೂಪಶ್ರೀ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಹಾಗೂ ಸಂಗೀತ ಕಾರ್ಯಕ್ರಮ ಜರುಗಲಿದೆ.

ಮಧ್ಯಾಹ್ನ 2 ಗಂಟೆಗೆ ಸುಬ್ರಾಯ ಮತ್ತಿಹಳ್ಳಿ ಅವರ ಅಧ್ಯಕ್ಷತೆಯಲ್ಲಿ ಎಐ ಸಾಧಕ– ಬಾಧಕಗಳು ಕುರಿತು ವಿಶೇಷ ಸಂವಾದ ಗೋಷ್ಠಿ ಏರ್ಪಡಿಸಲಾಗಿದೆ. ಇದರಲ್ಲಿ ಸೀತಾರಾಮ ಕಾನಳ್ಳಿ, ಕೃಷ್ಣ ಪದಕಿ ಸೇರಿದಂತೆ ಹಲವರು ಪಾಲ್ಗೊಂಡು ತಂತ್ರಜ್ಞಾನ ಮತ್ತು ಸಾಹಿತ್ಯದ ಸವಾಲುಗಳ ಕುರಿತು ಚರ್ಚಿಸಲಿದ್ದಾರೆ.

ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಸಾಹಿತಿ ಎಚ್.ಆರ್. ಅಮರನಾಥ ಅವರಿಗೆ ಈ ವರ್ಷದ ಉಪಾಯನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಭಾಗೀರಥಿ ಹೆಗಡೆ ಅಧ್ಯಕ್ಷತೆ ವಹಿಸುವರು. ವಿಜಯನಳಿನಿ ರಮೇಶ ಅಭಿನಂದನಾ ಭಾಷಣ ಮಾಡುವರು. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಳಗ ವಿನಂತಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-20-133439325

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.