ಶಿರಸಿ: ನಗರದ ಮಾರಿಕಾಂಬಾ ದೇವಸ್ಥಾನದ ಮುಂಭಾಗದಲ್ಲಿ ದೇವಸ್ಥಾನದ ವತಿಯಿಂದ ನೂತನವಾಗಿ ನಿರ್ಮಿಸಲಾದ ಪೊಲೀಸ್ ಸಹಾಯ ಘಟಕವನ್ನು ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಇಲಾಖೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಭೀಮಣ್ಣ ನಾಯ್ಕ, ‘ಮಾರಿಗುಡಿ ರಸ್ತೆಯನ್ನು ಮುಂದಿನ ದಿನಗಳಲ್ಲಿ ಅಗಲೀಕರಣಗೊಳಿಸುವ ಯೋಜನೆಯಿದೆ. ಈ ಹಿನ್ನೆಲೆಯಲ್ಲಿ ಹಳೆಯ ಕಟ್ಟಡದ ಬದಲಾಗಿ ಹೊಸ ಜಾಗದಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಈ ಸಹಾಯ ಘಟಕವನ್ನು ನಿರ್ಮಿಸಲಾಗಿದೆ. ಇಲ್ಲಿ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಸೇರಿದಂತೆ ಭದ್ರತೆಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ಮತ್ತು ಭಕ್ತರ ಹಿತದೃಷ್ಟಿಯಿಂದ ರಸ್ತೆ ಅಗಲೀಕರಣ ಅನಿವಾರ್ಯವಾಗಿದ್ದು, ಜನರು ಸ್ವಯಂಪ್ರೇರಿತವಾಗಿ ಇಲಾಖೆಯೊಂದಿಗೆ ಸಹಕರಿಸಬೇಕು. ಪೊಲೀಸ್ ಇಲಾಖೆಯ ಕೆಲಸಗಳಿಗೆ ಸಾರ್ವಜನಿಕರು ಸಾಥ್ ನೀಡಿದಾಗ ಮಾತ್ರ ಸುಗಮ ವ್ಯವಸ್ಥೆ ಸಾಧ್ಯ’ ಎಂದು ತಿಳಿಸಿದರು.

‘ದೇವಸ್ಥಾನಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಭಕ್ತಾದಿಗಳ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಈ ಹೈಟೆಕ್ ಪೊಲೀಸ್ ಚೌಕಿಯನ್ನು ನಿರ್ಮಿಸಲಾಗಿದೆ. ಹೊಸ ಘಟಕವು ಇನ್ನು ಮುಂದೆ ನಗರದ ಪ್ರಮುಖ ಆಯಕಟ್ಟಿನ ಪ್ರದೇಶದಲ್ಲಿ ಪೊಲೀಸ್ ಕಣ್ಗಾವಲು ಹೆಚ್ಚಿಸಲು ಸಹಕಾರಿಯಾಗಲಿದೆ’ ಎಂದರು.

ಮಾರಿಕಾಂಬಾ ದೇವಸ್ಥಾನದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಆರ್.ಜಿ.ನಾಯ್ಕ, ಡಿವೈಎಸ್ಪಿ ಗೀತಾ ಪಾಟೀಲ ಹಾಗೂ ದೇವಸ್ಥಾನದ ಧರ್ಮದರ್ಶಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-20-89610841

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.