ಶಿರಸಿ: ಘಟ್ಟದ ಮೇಲಿನ ತಾಲ್ಲೂಕುಗಳ ಜನತೆಗೆ ವರದಾನವಾಗಿರುವ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯ ಉನ್ನತೀಕರಣ ಕಾಮಗಾರಿ ಶೇ 90ರಷ್ಟು ಮುಗಿದಿದ್ದು, ಆಸ್ಪತ್ರೆಗೆ ಅಗತ್ಯವಿರುವ ಒಟ್ಟು 37 ವಿವಿಧ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶಿಸಿದೆ.

ಆಸ್ಪತ್ರೆಯನ್ನು ಸದ್ಯ 100ರಿಂದ 250 ಹಾಸಿಗೆಗಳ ಸಾಮರ್ಥ್ಯಕ್ಕೆ ವಿಸ್ತರಿಸುವ ಕಾರ್ಯ ಅಂತಿಮ ಹಂತದಲ್ಲಿದೆ. ಕಟ್ಟಡದ ಬಹುತೇಕ ಕೆಲಸಗಳು ಮುಗಿದಿದೆ. ಆಸ್ಪತ್ರೆ ದೊಡ್ಡದಾಗುತ್ತಿದ್ದಂತೆ ರೋಗಿಗಳ ಸಂಖ್ಯೆಯೂ ಹೆಚ್ಚಲಿರುವ ಹಿನ್ನೆಲೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ನೇಮಕಾತಿಗೆ ಆದೇಶವಾಗಿದೆ.

‘ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಟ್ಟು 97 ಮಂಜೂರಾತಿ ಹುದ್ದೆಗಳಿದ್ದು, ಅದರಲ್ಲಿ ಕೇವಲ 43 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 54 ಹುದ್ದೆಗಳು ಖಾಲಿ ಉಳಿದಿದ್ದವು. ಆಸ್ಪತ್ರೆಯ ಆವರಣದಲ್ಲಿರುವ 60 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಒಟ್ಟು 23 ಹುದ್ದೆಗಳ ಪೈಕಿ 13 ಹುದ್ದೆಗಳು ಭರ್ತಿಯಾಗಿದ್ದು, 10 ಹುದ್ದೆಗಳು ಖಾಲಿ ಇದ್ದವು. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದುದರಿಂದ ಸಕಾಲಕ್ಕೆ ಚಿಕಿತ್ಸೆ ಸಿಗದೆ ತೊಂದರೆಯಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಈಗ ಮೊದಲ ಹಂತದ ಹುದ್ದೆಗಳ ಮಂಜೂರಾತಿಯಾಗಿದ್ದು, ಪಂಡಿತ ಸಾರ್ವಜನಿಕ ಆಸ್ಪತ್ರೆ ಕೇಂದ್ರೀಕರಿಸಿ ಹುದ್ದೆಗಳ ಮಂಜೂರಾತಿಯಾಗಿದೆ’ ಎಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ.ನೇತ್ರಾವತಿ ಶಿರ್ಸಿಕರ ತಿಳಿಸಿದರು.

‘ಮಂಜೂರಾಗಿರುವ ಒಟ್ಟು 37 ಹುದ್ದೆಗಳ ಪೈಕಿ ಅತ್ಯಂತ ಪ್ರಮುಖವಾದ ತಜ್ಞ ವೈದ್ಯರನ್ನು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ತಲಾ ಒಬ್ಬೊಬ್ಬರಂತೆ ಫಿಸಿಶಿಯನ್, ಜನರಲ್ ಸರ್ಜನ್, ಅರವಳಿಕೆ ತಜ್ಞ ಹಾಗೂ ಕೀಲು ಮತ್ತು ಮೂಳೆ ತಜ್ಞರ ಹುದ್ದೆಗಳು ಸೇರಿವೆ. ಗುತ್ತಿಗೆ ಆಧಾರದ ಮೇಲೆ ತಲಾ ಒಬ್ಬರಂತೆ ಪ್ಯಾಥಾಲಜಿಸ್ಟ್, ಸೈಕಿಯಾಟ್ರಿಸ್ಟ್, ಮುಖ್ಯ ದಂತ ಆರೋಗ್ಯಾಧಿಕಾರಿ, ನೇತ್ರಾಧಿಕಾರಿ ಮತ್ತು ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ ಹುದ್ದೆಗಳನ್ನು ತುಂಬಲು ಅವಕಾಶ ನೀಡಲಾಗಿದೆ’ ಎಂದರು.

‘ಆಸ್ಪತ್ರೆಯ ದೈನಂದಿನ ರೋಗಿಗಳ ಆರೈಕೆಗೆ ಅತ್ಯಗತ್ಯವಾಗಿದ್ದ 24 ಶುಶ್ರೂಷಕರ (ನರ್ಸ್) ಹುದ್ದೆಗಳನ್ನುಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಒಪ್ಪಿಗೆ ಸಿಕ್ಕಿದೆ. ಮುಂಬಡ್ತಿ ವಿಧಾನದ ಮೂಲಕ ಒಂದನೇ ಹಾಗೂ ಎರಡನೇ ದರ್ಜೆಯ ತಲಾ ಒಂದು ಶುಶ್ರೂಷಕ ಅಧೀಕ್ಷಕ ಹುದ್ದೆ ಸೇರಿ ಒಟ್ಟು 2 ಹುದ್ದೆಗಳನ್ನು ಹಾಗೂ ಹೊರಗುತ್ತಿಗೆ ಆಧಾರದ ಮೇಲೆ 2 ಕಿರಿಯ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಆದೇಶಿಸಿದೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-20-1795902972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.