ಶಿರಸಿ: ಶಿರಸಿ ಉಪವಿಭಾಗದ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 17 ಕಳ್ಳತನದ ಪ್ರಕರಣಗಳಿಗೆ ಸಂಬಂಧಿಸಿದ ನಗದು, ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ನಗರದ ಗುರುಸಿದ್ದೇಶ್ವರ ಸಾಂಸ್ಕೃತಿಕ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಿರಸಿ ನಗರ ಠಾಣೆ, ಮಾರುಕಟ್ಟೆ ಠಾಣೆ, ಬನವಾಸಿ ಠಾಣೆ, ಗ್ರಾಮೀಣ ಠಾಣೆ, ಮುಂಡಗೋಡ, ಯಲ್ಲಾಪುರ ಹಾಗೂ ಸಿದ್ದಾಪುರ ಠಾಣೆಗಳ ವ್ಯಾಪ್ತಿಯಲ್ಲಿ ಪತ್ತೆ ಹಚ್ಚಲಾದ ಸ್ವತ್ತುಗಳನ್ನು ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಮಾತನಾಡಿ, ‘ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮರ್ಪಣಾ ಮನೋಭಾವ ಹಾಗೂ ಅತ್ಯುತ್ತಮ ಕಾರ್ಯವೈಖರಿಯಿಂದಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗಿದೆ. ಇಂದಿನ ಡಿಜಿಟಲ್ ಯುಗದಲ್ಲಿ ಅಪರಾಧಗಳ ಸ್ವರೂಪ ಬದಲಾಗಿದ್ದು, ಕಳ್ಳರು ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಇಲಾಖೆಯೂ ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗಿದ್ದು, ಪ್ರತಿಯೊಬ್ಬ ಸಿಬ್ಬಂದಿಯೂ ತಾಂತ್ರಿಕ ಕೌಶಲಗಳನ್ನು ಮೈಗೂಡಿಸಿಕೊಂದ್ದಾರೆ’ ಎಂದರು.

ಡಿಎಸ್ಪಿ ಗೀತಾ ಪಾಟೀಲ ಮಾತನಾಡಿ, ‘ಕಳ್ಳತನವಾದ ಸ್ವತ್ತುಗಳನ್ನು ಸಾರ್ವಜನಿಕವಾಗಿ ಮಾಲೀಕರಿಗೆ ಮರಳಿ ಒಪ್ಪಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಈ ಯಶಸ್ಸಿನಲ್ಲಿ ಪಾಲ್ಗೊಂಡ ಎಲ್ಲಾ ಸಿಬ್ಬಂದಿ ಅಭಿನಂದನಾರ್ಹರು’ ಎಂದರು. ಇದೇ ಸಂದರ್ಭದಲ್ಲಿ ತನಿಖಾ ಕಾರ್ಯದಲ್ಲಿ ಶ್ರಮಿಸಿದ ವಿವಿಧ ಸಿಬ್ಬಂದಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

ಶಿರಸಿ ವೃತ್ತದ ಸಿಪಿಐ ಶಶಿಕಾಂತ ವರ್ಮ, ಗ್ರಾಮೀಣ ಠಾಣೆ ಪಿಐ ರಮೇಶ ಹೂಗಾರ, ಯಲ್ಲಾಪುರದ ರಮೇಶ ಹಾನಾಪುರ, ಮುಂಡಗೋಡಿನ ರಂಗನಾಥ ನೀಲಮ್ಮನರ, ಸಿದ್ದಾಪುರ ಠಾಣೆ ಜೆ.ಬಿ.ಸೀತಾರಾಮ ಹಾಗೂ ಉಪವಿಭಾಗದ ಎಲ್ಲ ಠಾಣೆಯ ಪಿಎಸ್ಐಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-20-1555533388

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.