ಶಿರಸಿ: ಶಿರಸಿ-ಯಲ್ಲಾಪುರ ಮಾರ್ಗದಲ್ಲಿ ನಗರದಂಚಿನ ದೇವಿನಿಲಯ ಹಾಗೂ ಹೊಸ್ಮನೆ ಭಾಗದ ಸುತ್ತಮುತ್ತಲಿನ ರಸ್ತೆ ಬದಿಗಳಲ್ಲಿ ಸಾರ್ವಜನಿಕರು ಕಸ ಎಸೆಯುತ್ತಿರುವುದರಿಂದ ಪರಿಸರ ಹದಗೆಟ್ಟಿದ್ದು, ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಇಸಳೂರು ಗ್ರಾಮ ಪಂಚಾಯಿತಿಯು ಕಸ ವಿಲೇವಾರಿ ಮಾಡುವ ಮೂಲಕ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದೆ.

ಕಳೆದ ಕೆಲವು ದಿನಗಳಿಂದ ಈ ಮಾರ್ಗದ ರಸ್ತೆ ಬದಿಗಳಲ್ಲಿ ಕಸದ ರಾಶಿಗಳು ಸಂಗ್ರಹಗೊಂಡು ಗಬ್ಬು ನಾರುತ್ತಿತ್ತು. ಇದರಿಂದ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಯಾಗುತ್ತಿತ್ತು. ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯೂ ಎದುರಾಗಿತ್ತು. ಸಾರ್ವಜನಿಕರ ದೂರು ಹಾಗೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪಂಚಾಯಿತಿ ಸಿಬ್ಬಂದಿ ಗುರುವಾರ ಸ್ಥಳಕ್ಕೆ ಭೇಟಿ ನೀಡಿ, ರಸ್ತೆ ಬದಿಯಲ್ಲಿದ್ದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಸಂಪೂರ್ಣವಾಗಿ ತೆರವುಗೊಳಿಸಿ ಸ್ವಚ್ಛಗೊಳಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಪಿಡಿಒ ಜಯವೀರ ಭಟ್, ‘ಸಾರ್ವಜನಿಕರು ತಮ್ಮ ಮನೆ ಹಾಗೂ ಉದ್ದಿಮೆಗಳ ಕಸವನ್ನು ಜವಾಬ್ದಾರಿಯುತವಾಗಿ ವಿಲೇವಾರಿ ಮಾಡಬೇಕು. ರಸ್ತೆ ಬದಿಯಲ್ಲಿ ಕಸ ಬಿಸಾಡುವುದರಿಂದ ಪರಿಸರ ಮಾಲಿನ್ಯವಾಗುವುದಲ್ಲದೆ, ಸಾರ್ವಜನಿಕ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.

ಇದೇ ವೇಳೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಅವರು, ‘ಇನ್ಮುಂದೆ ಯಾರಾದರೂ ರಸ್ತೆ ಬದಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಗ್ರಾಮ ಪಂಚಾಯಿತಿ ವತಿಯಿಂದ ದಂಡ ವಿಧಿಸುವುದರ ಜತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರೂ ಸ್ವಚ್ಛತೆಯ ಬಗ್ಗೆ ಜಾಗೃತಿ ವಹಿಸಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.