ಶಿರಸಿ: ‘ಗ್ರಾಮೀಣ ಭಾಗದ ಜನರ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪೂರಕವಾದ ಮೂಲಸೌಕರ್ಯ ಒದಗಿಸುವುದು ನಮ್ಮ ಆದ್ಯತೆಯಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ತಾಲ್ಲೂಕಿನ ಅಂಡಗಿ ಗುರುಮಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಸಭಾ ಭವನದ ಭೂಮಿ ಪೂಜೆಯನ್ನು ಬುಧವಾರ ನೆರವೇರಿಸಿ, ಅವರು ಕಾಮಗಾರಿಗೆ ಅಧಿಕೃತ ಚಾಲನೆ ನೀಡಿ ಮಾತನಾಡಿದರು.

‘ಗ್ರಾಮೀಣ ಭಾಗದಲ್ಲಿ ಸಾರ್ವಜನಿಕ ಸಮಾರಂಭಗಳು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಸೂಕ್ತವಾದ ಸ್ಥಳದ ಅವಶ್ಯಕತೆಯಿತ್ತು. ಈ ಭಾಗದ ಜನರ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಇಂದು ಸಭಾಭವನದ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಈ ಭವನವು ಮುಂದಿನ ದಿನಗಳಲ್ಲಿ ಗ್ರಾಮದ ಸರ್ವತೋಮುಖ ಬೆಳವಣಿಗೆಯ ಕೇಂದ್ರವಾಗಲಿದೆ’ ಎಂದರು.

ಇದೇ ವೇಳೆ ಕಾಮಗಾರಿಯನ್ನು ನಿಗದಿತ ಕಾಲಮಿತಿಯೊಳಗೆ ಅತ್ಯಂತ ಗುಣಮಟ್ಟದಿಂದ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ಉಪಸ್ಥಿತರಿದ್ದ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಅಂಡಗಿ ಮಠದ ಭಕ್ತರು, ಸ್ಥಳೀಯ ಪಂಚಾಯಿತಿ ಮಾಜಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು, ಹಿರಿಯರು, ಸಾರ್ವಜನಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-20-248923313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.