ಶಿರಸಿ: ನಗರದ ಭಗವಾನ್ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಯ 21ನೇ ವರ್ಷದ ವಾರ್ಷಿಕೋತ್ಸವವು ಇತ್ತೀಚೆಗೆ ವಿಜೃಂಭಣೆಯಿಂದ ನೆರವೇರಿತು.

ವಾರ್ಷಿಕೋತ್ಸವದ ಅಂಗವಾಗಿ ಮುಂಜಾನೆ 5.30ಕ್ಕೆ ಕಾಕಡಾರತಿಯೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡವು. ಬಾಬಾರವರಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಅಷ್ಟೋತ್ತರ ಶತನಾಮಾವಳಿ ಹಾಗೂ ವಿಷ್ಣು ಸಹಸ್ರನಾಮ ಪಠಣ ಜರುಗಿತು. ನಂತರ ವಿವಿಧ ಪುಷ್ಪಗಳಿಂದ ಬಾಬಾರವರ ಮೂರ್ತಿಗೆ ಅಲಂಕಾರ ಮಾಡಿ ಅರ್ಚನೆ ಹಾಗೂ ಗಣಹೋಮ ನಡೆಸಲಾಯಿತು.

ಬೆಳಿಗ್ಗೆ 10.30ರಿಂದ ಮಧ್ಯಾಹ್ನದವರೆಗೆ ಭಜನಾ ಕಾರ್ಯಕ್ರಮ ಭಕ್ತರ ಗಮನ ಸೆಳೆಯಿತು. 12.30ಕ್ಕೆ ಪೂರ್ಣಾಹುತಿ, ನೈವೇದ್ಯ ಸಮರ್ಪಣೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಳಿಕ ಭಕ್ತರಿಗೆ ತೀರ್ಥ ಪ್ರಸಾದ ವಿತರಿಸಿ, ಸಾಮೂಹಿಕ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ಸಂಜೆ 5.30ಕ್ಕೆ ಪುನಃ ಭಜನೆ, ಸಂಜೆ 6.30ರಿಂದ ವಿನಾಯಕ ಕಾಲನಿಯ ಸತ್ಯಸಾಯಿ ಬಾಲ ವಿಕಾಸ ಕೇಂದ್ರದ ಮಕ್ಕಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಕ್ಕಳಿಗೆ ಮಂದಿರದ ವತಿಯಿಂದ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು. ಮಹಾಮಂಗಳಾರತಿಯ ನಂತರ ಪ್ರಸಾದ ವಿತರಣೆಯೊಂದಿಗೆ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಸಂಪನ್ನಗೊಂಡವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-20-812938361

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.