ಶಿರಸಿ: ‘ಅಭಿವೃದ್ಧಿಯಲ್ಲಿ ಕೇವಲ ಸರ್ಕಾರ ಮಾತ್ರವಲ್ಲದೆ, ಸೇವಾ ಸಂಸ್ಥೆಗಳ ಪಾತ್ರವೂ ಅಪಾರವಾಗಿದೆ’ ಎಂದು ಶಾಸಕ ಭೀಮಣ್ಣ ನಾಯ್ಕ ಅಭಿಪ್ರಾಯಪಟ್ಟರು.

ನಗರದ ಎಂ.ಎಂ. ಜೋಶಿ ಗಣೇಶ ನೇತ್ರಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೇತ್ರ ಉಚಿತ ತಪಾಸಣೆ, ಟೈಲರಿಂಗ್ ತರಬೇತಿ ಸಮಾರೋಪ ಹಾಗೂ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರೋಟರಿ ಶಿರಸಿ ಘಟಕ, ಇನ್ನರ್ ವೀಲ್ ಕ್ಲಬ್ ಆಫ್ ಶಿರಸಿ ಹೆರಿಟೇಜ್, ಎಂ.ಎಂ. ಜೋಶಿ ಗಣೇಶ ನೇತ್ರಾಲಯ ಹಾಗೂ ಪ್ರಣತಿ ಟೈಲರಿಂಗ್ ಕೇಂದ್ರಗಳು ಒಗ್ಗೂಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮವು ಮಹಿಳಾ ಸಬಲೀಕರಣ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಒಂದು ಪ್ರಮುಖ ಮೈಲಿಗಲ್ಲಾಗಿದೆ’ ಎಂದರು.

‘ಸ್ವಾವಲಂಬಿ ಬದುಕಿಗಾಗಿ ತರಬೇತಿ ಪಡೆದ ಮಹಿಳೆಯರಿಗೆ ಗೌರವ ಸಲ್ಲಿಕೆ ಹಾಗೂ ಸಾರ್ವಜನಿಕರಿಗೆ ಕಣ್ಣಿನ ಉಚಿತ ತಪಾಸಣೆಯಂತಹ ಜನಪರ ಕಾರ್ಯಗಳು ಸದೃಢ ಸಮಾಜ ನಿರ್ಮಾಣಕ್ಕೆ ಸಾಕ್ಷಿಯಾಗಿವೆ. ಇಂತಹ ಮಹತ್ಕಾರ್ಯಗಳಲ್ಲಿ ಪಾಲ್ಗೊಳ್ಳುವುದು ಜನಸೇವೆಯ ಒಂದು ಅವಿಭಾಜ್ಯ ಭಾಗವಾಗಿದೆ’ ಎಂದರು.

ಸಮಾರಂಭದಲ್ಲಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ನೇತ್ರ ತಪಾಸಣಾ ಶಿಬಿರದಲ್ಲಿ ಅನೇಕ ಜನರು ಭಾಗವಹಿಸಿದ್ದರು. ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ತರಬೇತಿ ಪಡೆದ ಮಹಿಳೆಯರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-20-107398604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.