ಶಿರಸಿ: ಮದ್ಯ ಸೇವಿಸಲು ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಅಳಿಯನನ್ನು ಕೊಲೆ ಮಾಡಿದ ಮಾವನಿಗೆ ಶಿರಸಿಯ ಜಿಲ್ಲಾ ಮತ್ತು ಸತ್ರ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಗುರುವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಾಧೀಶ ಕಿರಣ ಕಿಣಿ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ತಾಲ್ಲೂಕಿನ ಮಳಲಿ ಗ್ರಾಮದ ವೆಂಕಟರಮಣ ಗಣಪಗೌಡ ಶಿಕ್ಷೆಗೆ ಒಳಗಾದ ಆರೋಪಿ. ಈತನ ಅಳಿಯ ಮಂಜುನಾಥ ರಾಮಾ ಗೌಡ ಕೊಲೆಯಾದ ವ್ಯಕ್ತಿ. 2024ರ ಮೇ 2ರಂದು ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿದ ವೆಂಕಟರಮಣ, ಕೊಲೆ ಮಾಡುವ ಉದ್ದೇಶದಿಂದಲೇ ಅಳಿಯ ಮಂಜುನಾಥನಿಗೆ ಕಟ್ಟಿಗೆಯಿಂದ ಮನಬಂದಂತೆ ಹೊಡೆದು ಸಾಯಿಸಿದ್ದ. ಮದ್ಯ ಕುಡಿಯಲು ಹಣ ನೀಡದ ಕೋಪವೇ ಈ ಕೊಲೆಗೆ ಪ್ರಮುಖ ಕಾರಣವಾಗಿತ್ತು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೋರ್ಟ್ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿದೆ. ಅಲ್ಲದೆ, ಮೃತನ ಪತ್ನಿಗೆ ₹50 ಸಾವಿರ ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಜೇಶ ಎಂ. ಮಳಗಿಕರ ವಾದ ಮಂಡಿಸಿದ್ದರು. ಅಂದಿನ ಪೊಲೀಸ್ ನಿರೀಕ್ಷಕ ಸೀತಾರಾಮ ಪ್ರಕರಣದ ತನಿಖೆ ನಡೆಸಿ ಕೋರ್ಟ್ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-20-633606491

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.