ಶಿರಸಿ: ತಾಲ್ಲೂಕು ಪಂಚಾಯಿತಿ ಸರ್ಕಾರಿ ಕಟ್ಟಡವನ್ನು ನಿಯಮ ಬಾಹಿರವಾಗಿ ಪತ್ರಿಕಾಗೋಷ್ಠಿಗೆ ಬಳಸಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟಿಸಿದರು.

ಪಶ್ಚಿಮ ಭಾಗದ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಸದಸ್ಯರು ತಮ್ಮ ರಾಜಕೀಯ ಪ್ರಚಾರಕ್ಕಾಗಿ ಸರ್ಕಾರಿ ಆವರಣವನ್ನು ಬಳಸಿಕೊಂಡಿರುವುದು ಸರಿಯಲ್ಲ, ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಒಕ್ಕೂಟದ ಅಧ್ಯಕ್ಷ ನವೀನ ಶೆಟ್ಟಿ ಹಾಗೂ ಸದಸ್ಯರಾದ ಜ್ಯೋತಿ ಹೆಗಡೆ, ನಾರಾಯಣ ಹೆಗಡೆ ಹಸೆಮನೆ ಸೇರಿದಂತೆ ಹಲವರು ಗುರುವಾರ ಕಟ್ಟಡದ ಒಳಗೆ ಪತ್ರಿಕಾಗೋಷ್ಠಿ ನಡೆಸಿದ್ದರು. ಈ ವೇಳೆ ಅವರು 15ನೇ ಹಣಕಾಸು ಯೋಜನೆಯಡಿ ಹಣ ಬಿಡುಗಡೆಯಾಗದ ಕುರಿತು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ, ಸರ್ಕಾರದ ವಿರುದ್ಧ ಮಾತನಾಡಲು ಸರ್ಕಾರಿ ಕಚೇರಿಯನ್ನೇ ವೇದಿಕೆಯನ್ನಾಗಿ ಮಾಡಿಕೊಂಡಿರುವುದು ಖಂಡನೀಯ ಎಂದು ಕಾಂಗ್ರೆಸ್ಸಿಗರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಗೌಡ, ‘ಸರ್ಕಾರಿ ಕಚೇರಿಯಲ್ಲಿ ಕುಳಿತು ಪಂಚಾಯಿತಿ ಮಾಜಿ ಸದಸ್ಯರು ಸರ್ಕಾರದ ವಿರುದ್ಧ ಟೀಕೆ ಮಾಡಿರುವುದು ಖಂಡನೀಯ. ಈ ಬಗ್ಗೆ ನಮಗೆ ಸ್ಪಷ್ಟನೆ ಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮವಾಗಲೇಬೇಕು’ ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ ಪ್ರತಿಕ್ರಿಯಿಸಿ, ‘ನಾನು ಕಚೇರಿಗೆ ಬರುವ ಮೊದಲೇ ಸಿಬ್ಬಂದಿಯೊಬ್ಬರು ಸುದ್ದಿಗೋಷ್ಠಿಗೆ ಅನುಮತಿ ನೀಡಿದ್ದು ತಪ್ಪಾಗಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮಾಹಿತಿ ನೀಡಲಾಗಿದ್ದು, ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪ್ರಮುಖರಾದ ಪ್ರಸನ್ನ ಶೆಟ್ಟಿ, ಸತೀಶ ನಾಯ್ಕ, ಅಬ್ಬಾಸ್ ತೋನ್ಸೆ, ಎಸ್.ಕೆ.ಭಾಗ್ವತ, ಜಾಫಿ ಪೀಟರ್, ಪ್ರಸನ್ನ ನಾಯ್ಕ, ದಿವಾಕರ ಹೆಗಡೆ, ರುಬೇಕಾ ಫರ್ನಾಂಡಿಸ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-20-1760099435

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.