ಶಿರಸಿ: ಮಳೆಗಾಲದ ಅತ್ಯಗತ್ಯ ಸಾಮಗ್ರಿಗಳು ಮತ್ತು ಶಾಲಾ ಮಕ್ಕಳ ಪಠ್ಯಪುಸ್ತಕ ಸೇರಿದಂತೆ ವಿವಿಧ ವಸ್ತುಗಳನ್ನು ವಿಶೇಷ ರಿಯಾಯಿತಿ ದರದಲ್ಲಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಇಲ್ಲಿನ ಟಿ.ಎಸ್.ಎಸ್. ಸಂಸ್ಥೆಯಲ್ಲಿ ಮಾನ್ಸೂನ್ ಮೇಳಕ್ಕೆ ಶುಕ್ರವಾರ ಚಾಲನೆ ದೊರೆತಿದೆ. ಮೇ 29ರಿಂದ ಜೂನ್ 7ರವರೆಗೆ ಸಂಸ್ಥೆಯ ಎಲ್ಲ ಶಾಖೆ ಹಾಗೂ ಮಿನಿ ಸೂಪರ್ ಮಾರ್ಕೆಟ್ಗಳಲ್ಲಿ ಈ ವಿಶೇಷ ಮಾರಾಟ ಮೇಳ ನಡೆಯಲಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ಮಾತನಾಡಿ, ‘ಮಾನ್ಸೂನ್ ಮೇಳವು ಟಿ.ಎಸ್.ಎಸ್.ನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ ಶಾಖೆಗಳಲ್ಲಿ ಹಾಗೂ ಸಂಘದ ವ್ಯಾಪ್ತಿಯ ಎಲ್ಲಾ ಮಿನಿ ಸೂಪರ್ ಮಾರ್ಕೆಟ್ಗಳಲ್ಲಿ ಏಕಕಾಲದಲ್ಲಿ ಜರುಗಲಿದೆ. ಸಾರ್ವಜನಿಕರು ಹಾಗೂ ಸಂಘದ ಸದಸ್ಯರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

‘ಸಂಘದ ಸೂಪರ್ ಮಾರ್ಕೆಟ್ನಲ್ಲಿ ವ್ಯವಹಾರ ನಡೆಸುವ ಸದಸ್ಯ ಗ್ರಾಹಕರಿಗೆ ವಾರ್ಷಿಕವಾಗಿ ಖರೀದಿ ಪ್ರೋತ್ಸಾಹಧನ ನೀಡುವ ಮಹತ್ವದ ನಿರ್ಧಾರ ಆಡಳಿತ ಮಂಡಳಿ ತೆಗೆದುಕೊಂಡಿದೆ’ ಎಂದರು.

ಟಿ.ಎಸ್.ಎಸ್. ಪ್ರಧಾನ ವ್ಯವಸ್ಥಾಪಕ ಗಿರೀಶ ಹೆಗಡೆ, ಸಂಘದ ಉಪಾಧ್ಯಕ್ಷ ಎಂ.ಎನ್.ಭಟ್, ನಿರ್ದೇಶಕರು, ಸಿಬ್ಬಂದಿ, ಸದಸ್ಯರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು. ಗೋಪಾಲ ಹೆಗಡೆ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-20-927015062

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.